
ಜು.14 ರಂದು ರೂಬಿ ಮಹೋತ್ಸವ ಸಮಾರಂಭ
ಉಳ್ಳಾಲ: ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಇದರ ಆಶ್ರಯದಲ್ಲಿ ರೂಬಿ ಮಹೋತ್ಸವ ಸಮಾರಂಭವು ಜು.14 ರಂದು ಸಂಜೆ ಐದು ಗಂಟೆಗೆ ಕಂಕನಾಡಿ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಲಿದೆ ಎಂದು ಫಾದರ್ ಮುಲ್ಲರ್ ವೈದ್ಯಕೀಯ ಸಂಸ್ಥೆಗಳ ನಿರ್ದೇಶಕ ಫಾ. ಫೌಸ್ಟಿನ್ ಲೂಕಾಸ್ ಲೋಬೊ ಹೇಳಿದರು.
ಅವರು ದೇರಳಕಟ್ಟೆ ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಫಾದರ್ ಮುಲ್ಲರ್ ಕಾಲೇಜು ನಿರ್ದೇಶಕ ರೆ.ಫಾ. ಫೌಸ್ಟಿನ್ ಲ್ಯೂಕಾಸ್ ಲೋಬೋ ಹಾಗೂ ಆಡಳಿತಾಧಿಕಾರಿ ರೆ.ಫಾ. ಡೊನಾಲ್ಡ್ ನಿಲೇಶ್ ಕ್ರಾಸ್ತಾ ನೇತೃತ್ವ ವಹಿಸಲಿದ್ದಾರೆ. ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧಿಕಾರಿ ಡಾ. ಪೀಟರ್ ಪೌಲ್ ಸಲ್ಡಾನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು ಧರ್ಮ ಪ್ರಾಂತ್ಯದ ಆಡಳಿತಾಧಿಕಾರಿ ಡಾ. ಬನಾರ್ಡ್ ಮೊರಾಸ್, ಮುಂಬೈ ಪಾಲ್ಪರ್ನ ಡಾ. ಎಮ್.ಎಲ್. ಧಾವಲೆ, ಸ್ಮಾರಕ ಟ್ರಸ್ಟ್ನ ಅಧ್ಯಕ್ಷ ಡಾ. ಕೆ.ಎಮ್. ಧಾವಲೆ, ಸಂಸ್ಥೆಯ ಮಾಜಿ ನಿರ್ದೇಶಕ ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದ ಸಿಬ್ಬಂದಿಗಳನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ರೂಬಿ ಜುಬಿಲಿ ಸ್ಮರಣಿಕೆಯನ್ನು ಅನಾವರಣಗೊಳಿಸಲಾಗುವುದು ಎಂದು ಹೇಳಿದರು.
ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಫಾ. ನೆಲ್ಸನ್ ಧೀರಜ್ ಪಾಯಸ್, ಫಾ. ಡೊನಾಲ್ಡ್ ನಿಲೇಶ್ ಕ್ರಾಸ್ತಾ, ಪ್ರಾಂಶುಪಾಲ ಡಾ. ಇ.ಎಸ್.ಜೆ. ಪ್ರಭು ಕಿರಣ್, ಉಪ ಪ್ರಾಂಶುಪಾಲ ಡಾ. ವಿಲ್ಮಾ ಮೀರಾ ಡಿಸೋಜ, ವೈದ್ಯಕೀಯ ಅಧೀಕ್ಷಕ ಡಾ. ಗರೀಶ್ ನಾವಡ, ಸಂಚಾಲಕ ಡಾ. ಸ್ಕಂದನ್ ಎಸ್.ಕುಮಾರ್, ಮಾಧ್ಯಮ ಸಂಚಾಲಕ ಡಾ. ಶರ್ಲಿನ್ ಪೌಲ್ ಉಪಸ್ಥಿತರಿದ್ದರು.