ಉದ್ಯೋಗದಲ್ಲಿಯೂ ಅಭಿವೃದ್ಧಿ ಕಾಣಬೇಕು: ಸ್ಪೀಕರ್ ಯು.ಟಿ. ಖಾದರ್

ಉದ್ಯೋಗದಲ್ಲಿಯೂ ಅಭಿವೃದ್ಧಿ ಕಾಣಬೇಕು: ಸ್ಪೀಕರ್ ಯು.ಟಿ. ಖಾದರ್


ಉಳ್ಳಾಲ: ಕೇವಲ ರಸ್ತೆ, ಚರಂಡಿ ಮಾತ್ರ ಅಭಿವೃದ್ಧಿ ಮಾಡುವುದಲ್ಲ, ಉದ್ಯೋಗದಲ್ಲಿಯೂ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಬೇಕು ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇದರ ಆಶ್ರಯದಲ್ಲಿ ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್‌ನಲ್ಲಿ ಆಗಸ್ಟ್ 1 ಮತ್ತು 2 ರಂದು ನಡೆಯುವ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳದ ಪೂರ್ವ ಭಾವಿಯಾಗಿ ಕಲ್ಲಾಪುವಿನ ಬ್ಲಾಕ್ ಶುಗರ್ ಆವರಣದಲ್ಲಿ ನಡೆದ ಉದ್ಯೋಗ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪದವೀಧರ ನಿರುದ್ಯೋಗಿಗಳು ಯಾವ ಗ್ರಾಮದಲ್ಲಿ ಎಷ್ಟು ಮಂದಿ ಇದ್ದಾರೆ ಎನ್ನುವುದನ್ನು ಗುರುತಿಸುವ ಕೆಲಸ ಆಗಬೇಕು. ಅಂತಹವರಿಗೆ ಉದ್ಯೋಗ ಒದಗಿಸಿ  ಕೊಡುವ ನಿಟ್ಟಿನಲ್ಲಿ ಗ್ರಾಮದ ಪ್ರಮುಖರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.

ಮೂಡುಬಿದಿರೆಯಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ ಆಗಿದೆ. ಅರ್ಹತೆಗೆ ಅನುಗುಣವಾಗಿ ಉದ್ಯೋಗ ಸಿಗುತ್ತದೆ. ಎಲ್ಲದಕ್ಕೂ ಪ್ರಯತ್ನ ಮುಖ್ಯ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅವರು ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್. ಈಶ್ವರ್, ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಮಿತ್ ಶೆಟ್ಟಿ, ಪಂಚ ಗ್ಯಾರಂಟಿ ಸಮಿತಿಯ ಜಿಲ್ಲಾಧ್ಯಕ್ಷ ರಫೀಕ್ ಅಂಬ್ಲಮೊಗರು, ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ವಿವೇಕಾನಂದ ಎಲ್. ಸನಿಲ್, ಸೋಮೇಶ್ವರ ಪುರಸಭೆ ಸದಸ್ಯ ಪುರುಷೋತ್ತಮ ಪಿಲಾರ್, ಮುಖಂಡ ಮನ್ಸೂರ್ ಮಂಚಿಲ ಮತ್ತಿತರರು ಉಪಸ್ಥಿತರಿದ್ದರು. 

ಕನ್ನಡ ಪ್ರಾಧ್ಯಾಪಕ ಡಾ. ಯೋಗೀಶ್ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article