
ಕೆಸೆಟ್-2025: ಆ.28ರಿಂದ ಅರ್ಜಿ ಸಲ್ಲಿಕೆ ಆರಂಭ
Monday, August 25, 2025
ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025(ಕೆಸೆಟ್-2025) ನ.9ರಂದು ನಡೆಯಲಿದ್ದು, ಇದಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆ.28ರಿಂದ ಆರಂಭಗೊಳ್ಳಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ರವಿವಾರ ಪ್ರಕಟಣೆ ಹೊರಡಿಸಿರುವ ಅವರು, ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆ.19ರವರೆಗೆ ಅವಕಾಶವಿರುತ್ತದೆ. ಅ.೨೪ರಂದು ಪ್ರವೇಶ ಪತ್ರ(ಹಾಲ್ ಟಿಕೆಟ್) ಬಿಡುಗಡೆಯಾಗಲಿದೆ ಎಂದಿದ್ದಾರೆ.
ಆನ್ ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದ್ದು, ಇತರ ಯಾವುದೇ ವಿಧದಲ್ಲಿ ಅರ್ಜಿ ಸ್ವೀಕರಿಸುವುದಿಲ್ಲ. ಕೆಇಎ ವೆಬ್ ಸೈಟ್ https://cetonline.karnataka.gov.in/kea/ ಅನ್ನು ಪ್ರವೇಶಿಸುವ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು. ಒಟ್ಟು 33 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.