ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ-ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ

ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ-ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ


ಬೆಂಗಳೂರು: ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಸಂಜೆ ಪ್ರತಿಕ್ರಿಯೆ ನೀಡಿ, ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ ಎಂದು ತಿಳಿಸಿದರು.

ಕರಾವಳಿ ಭಾಗದ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಸಚಿವರುಗಳ ಜೊತೆ ಮೊಟ್ಟ ಮೊದಲ ಸಭೆ ನಡೆಸಲಾಯಿತು. ಅಧಿಕಾರಿಗಳೂ ಸಹ ಸಭೆಯಲ್ಲಿ ಹಾಜರಿದ್ದರು. ಪರಿಹಾರೋಪಾಯಗಳ ಬಗ್ಗೆ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article