
ಅಡಕೆ ಕಳ್ಳನ ಬಂಧನ
ಬಂಟ್ವಾಳ: ತಾಲೂಕಿನ ಮಣಿನಾಲ್ಕೂರು ಗ್ರಾಮದ ಪುಂಜೂರು ಎಂಬಲ್ಲಿ ಜುಲೈ 3ರಿಂದ 22ರ ಅವಧಿಯಲ್ಲಿ ಸುಮಾರು 2.2 ಲಕ್ಷ ರೂ. ಮೌಲ್ಯದ ಅಡಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ತಾಲೂಕಿನ ಪೈಚಾರು ಗ್ರಾಮದ ಸತೀಶ್ (29) ಬಂಧಿತ ಆರೋಪಿಯಾಗಿದ್ದು, ಈತನಿಂದ ಕಳವುಗೈದ 74 ಸಾ.ರೂ. ಮೌಲ್ಯದ 15 ಚೀಲ ಒಣ ಅಡಿಕೆ, ಕಳವು ಅಡಿಕೆಯನ್ನು ಮಾರಾಟ ಮಾಡಿದ ನಗದು ಹಣ 70 ಸಾ.ರೂ. ಹಾಗೂ ಕೃತ್ಯಕ್ಕೆ ಬಳಸಿದ ಆಪೆ ಗೂಡ್ಸ್ ವಾಹನ ಸೇರಿ 2,24,000 ರೂ. ಮೌಲ್ಯದ ಸ್ವತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ, ಜುಲೈ 3ರಿಂದ 22ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ 2.20 ಲ.ರೂ. ಮೌಲ್ಯದ, ಒಣ ಅಡಿಕೆ ಕಳವಿನ ಬಗ್ಗೆ ಜುಲೈ 23ರಂದು ಪ್ರಕರಣ ದಾಖಲಾಗಿತ್ತು.
ಇದೀಗ ಆರೋಪಿಯನ್ನು ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.