
ಅಕ್ರಮ ಗೋವಧಾ ಕೇಂದ್ರಕ್ಕೆ ಪೊಲೀಸ್ ದಾಳಿ
Monday, August 11, 2025
ಬಂಟ್ವಾಳ: ತಾಲೂಕಿನ ಮಾರಿಪಳ್ಳ ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋವಧಾ ಕೇಂದ್ರಕ್ಕೆ ಭಾನುವಾರ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದಾರೆ.
ಮಾರಿಪಳ್ಳದ ಹಸನಬ್ಬ ಎಂಬಾತನ ಮನೆಯಲ್ಲಿಯೇ ಅಕ್ರಮವಾಗಿ ಗೋವಧೆ ನಡೆಯುತ್ತಿರುವ ಬಗ್ಗೆ ಖಚಿತ ವರ್ತಮಾನದ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪಿಎಸ್‌ಐ ಕಲೈಮಾರ್ ಮತ್ತವರ ತಂಡ ಈ ದಾಳಿ ಕಾರ್ಯಾಚರಣೆ ನಡೆಸಿದೆ.
ಹಸನಬ್ಬ ಹಾಗೂ ಮತ್ತೊರ್ವ ಸೇರಿಕೊಂಡು ಅಕ್ರಮವಾಗಿ ಹಸುವನ್ನು ವಧೆಗೈದು ಬಳಿಕ ಗೋಮಾಂಸವನ್ನು ಮಾರಾಟ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ. ಪೊಲೀಸರ ದಾಳಿ ವೇಳೆ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳು ಹಸುವೊಂದನ್ನು ವಧೆ ಮಾಡಿದ್ದು, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಆರೋಪಿಗಳಿಬ್ಬರು ಸ್ಥಳದಿಂದ ಕಾಲ್ಕಿತ್ತಿದ್ದಾರೆನ್ನಲಾಗಿದೆ.
ಪೊಲೀಸರು ಸ್ಥಳದಲ್ಲಿದ್ದ ಸೊತ್ತುಗಳನ್ನು ಹಾಗೂ ಸುಮಾರು 15 ಸಾ.ರೂ. ಮೌಲ್ಯದ ಒಂದು ಪಿಕಪ್ ನಷ್ಟು ಗೋಮಾಂಸ, ತ್ಯಾಜ್ಯವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.