ಮಂಚಿ ಕುಕ್ಕಾಜೆ ಪ್ರೌಢಶಾಲೆಯಲ್ಲಿ ಸ್ವಾತಂತ್ರೋತ್ಸವ
Friday, August 15, 2025
ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ(ರಿ) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಮಂಚಿ ಕುಕ್ಕಾಜೆ ಪ್ರೌಢಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ 10ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಾದ ರಂಝೀನ ಬಾನು, ಫಾತಿಮತ್ ಆಜ್ಮಿಯ, ಆಯಿಷತ್ ಫಝೀಲ, ಸ್ವಾಲಿಯ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.
ಪಂಚಾಯತ್ ಅಧ್ಯಕ್ಷ ಇಬ್ರಾಹಿಂ, ಪಂಚಾಯತ್ ಸದಸ್ಯರು, ಶಾಲಾ ಮಂಡಳಿ ಅಧ್ಯಕ್ಷ ಗಣೇಶ್ ಐತಾಳ್, ವಾತ್ಸಲ್ಯಮಯಿ ಸಂಸ್ಥಾಪಕರು ನ್ಯಾಯವಾದಿ ಜವಾಹರ್ ಬಾಲ್ ಮಂಚ್‌ನ ಜಿಲ್ಲಾಧ್ಯಕ್ಷೆ ಶೈಲಜಾ ರಾಜೇಶ್, ಶಾಲಾ ಮುಖ್ಯ ಶಿಕ್ಷಕ ಅಶೋಕ್ ಕುಮಾರ್ ಉಪಸ್ಥಿತರಿದ್ದರು.
ವಿದ್ಯಾರ್ಥಿ ನಾಯಕಿ ರಶೀದ ವಂದಿಸಿ, ಶಿಕ್ಷಕಿ ಕುಸುಮ ಎಸ್.ಬಿ. ಕಾರ್ಯಕ್ರಮ ನಿರೂಪಿಸಿದರು