ರಾಜ್ಯದಲ್ಲಿ ಪಂಚಗ್ಯಾರಂಟಿಯಿಂದ ಕ್ರಾಂತಿ: ಸೌಮ್ಯ ರೆಡ್ಡಿ
ಮಂಗಳವಾರ ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಪಾಣೆಮಂಗಳೂರು ಮತ್ತುಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಸ್ವಾಭಿಮಾನದ ಬದುಕು ಸಾಗಿಸುವ ನಿಟ್ಟಿನಲ್ಲಿ ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಮಾನಸಿಕವಾಗಿಯು ಸಧೃಡರಾಗಿ ಪಕ್ಷದ ಚಟುವಟಿಕಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದ ಅವರು ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ಮಹಿಳೆಯರು ಕುಇಡ ಪ್ರಮುಖ ಪಾತ್ರ ವಹಿಸುತ್ತಿರುವುದು ಅಭಿನಂದನೀಯವಾಗಿದೆ ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಾತನಾಡಿ, ಮಹಿಳೆಯರ ಕೈಗೆ ಅಧಿಕಾರವನ್ನು ಕೊಟ್ಟಲ್ಲಿ ಪ್ರಾಮಾಣಿಕ ಮತ್ತು ಸಮರ್ಥವಾಗಿ ನಿಭಾಯಿಸುತ್ತಾರೆ ಎನ್ನುವುದಕ್ಕೆ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರು ಒಂದು ಒಳ್ಳೆ ನಿದರ್ಶನವಾಗಿದ್ದಾರೆ ಎಂದರು.
ಮಾಜಿ ಪ್ರಧಾನಿ ದಿವಂಗತ ರಾಜೀವಗಾಂಧಿಯವರ ಪಂಚಾಯತ್ ರಾಜ್ ವಿಕೇಂದ್ರಿಕರಣ ಪರಿಕಲ್ಪನೆಯಿಂದಾಗಿ ದೇಶದ ಗ್ರಾಮೀಣಭಾಗದಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಕಾಣುವಂತಾಗಿದೆ. ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿಯಾಗುವ ಎಲ್ಲಾ ಅವಕಾಶವಿದ್ದರೂ ತ್ಯಾಗಮಾಡಿದ್ದರು ಎಂದ ಅವರು ಮಹಿಳೆಯರಿಗೆ ವಿವಿಧ ಸ್ತರಗಳಲ್ಲಿ ಹೆಚ್ಚು, ಹೆಚ್ಚು ಅವಕಾಶ ನೀಡಿದ್ದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ ಎಂದು ಹೇಳಿದರು.
ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನಿಕಟಪೂರ್ವ ಅಧ್ಯಕ್ಷೆ ಶಾಲೆಟ್ ಪಿಂಟೋ, ನಿಯೋಜಿತ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ನಿಯೋಜಿತಾ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು.
ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐಡಾ ಸುರೇಶ್, ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಮಾಜಿ ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಅಶ್ವನಿಕುಮಾರ್ ರೈ, ಪುರಸಭಾಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ, ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಜಿಲ್ಲಾ ಸಮಿತಿ ಉಪಾಧ್ಯಕ್ಷ ನಾರಾಯಣ ನಾಯ್ಕ್, ಪಕ್ಷದ ಮುಖಂಡರಾದ ಅಬ್ಬಾಸ್ ಆಲಿ, ಪದ್ಮನಾಭ ರೈ, ಸುದೀಪ್ ಕುಮಾರ್ ರೈ, ನಮಿತಾ ರಾವ್, ನಮಿತಾ ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಬಡಕಬೈಲ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ, ನಿಯೋಜಿತ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ನಿಯೋಜಿತಾ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ ಅವರನ್ನು ಅಭಿನಂದಿಸಲಾಯಿತು.
ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ವಿಲ್ಮಾ ಮೋರಸ್ ಸ್ವಾಗತಿಸಿ, ನ್ಯಾಯವಾದಿ ಶೈಲಜಾ ರಾಜೇಶ್ ಕಾರ್ಯಕ್ತಮ ನಿರೂಪಿಸಿದರು.
