ಗೋ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬಜೆಪಿ ನಿಯೋಗದಿಂದ ಮನವಿ
Sunday, August 17, 2025
ಬಂಟ್ವಾಳ: ತುಂಬೆ ಗ್ರಾಮದ ವಳವೂರು ನಡಿಬೆಟ್ಟು ನಿವಾಸಿ ಕಾರ್ತಿಕ್ ಎಂಬವರು ಮೇಯಲು ಬಿಟ್ಟ ಹಸುವೊಂದನ್ನು ಅಕ್ರಮವಾಗಿ ವಧೆಗೈದಿರುವ ಕೃತ್ಯದ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು ಅವರ ನೇತೃತ್ವದ ನಿಯೋಗ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ಈ ಸಂದರ್ಭದಲ್ಲಿ ಮಂಡಲದ ಉಪಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ, ಮಂಡಲದ ಹಿಂದುಳಿದ ಮೋರ್ಚಾದ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ, ಪುದು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಕೇಶ್ ಶೆಟ್ಟಿ ತೇವು, ಪ್ರಧಾನ ಕಾರ್ಯದರ್ಶಿ ರೂಪೇಶ್ ಜ್ಯೋತಿಗುಡ್ಡೆ, ಮಂಡಲದ ರೈತ ಮೋರ್ಚಾದ ಅಧ್ಯಕ್ಷ ಪದ್ಮನಾಭ ಗಟ್ಟಿ, ಮಂಡಲದ ಉಪಾಧ್ಯಕ್ಷ ಹುಕ್ರಪ್ಪ ನಾಯ್ಕ, ಮಂಗಳೂರು ಮಂಡಲದ ಯುವ ಮೋರ್ಚಾದ ಅಧ್ಯಕ್ಷ ಮುರಳಿ ಕೊಣಾಜೆ, ತುಂಬೆ ಶಕ್ತಿ ಕೇಂದ್ರದ ಅಧ್ಯಕ್ಷ ಸುಶಾನ್ ಆಚಾರ್ಯ, ತುಂಬೆ ಗ್ರಾಮ ಪಂಚಾಯತ್ ಸದಸ್ಯರಾದ ಕಿಶೋರ್ ರಾಮಲ್ ಕಟ್ಟೆ, ಮನೋಹರ್ ಪೆರ್ಲಕ್ಕೆ, ರಾಘವ ಬಂಗೇರ ಪೆರ್ಲಬೈಲು ಮತ್ತಿತರರು ಉಪಸ್ಥಿತರಿದ್ದರು.