
ಬೈಕ್ ಢಿಕ್ಕಿ ಗಾಯಾಳು ಮೃತ್ಯು
ಬಂಟ್ವಾಳ: ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ರಸ್ತೆ ಮಧ್ಯೆ ದಾಟುತ್ತಿದ್ದ ದನವೊಂದಕ್ಕೆ ಢಿಕ್ಕಿಹೊಡೆದು ರಸ್ತೆಗೆ ಬಿದ್ದು ನಿಯಂತ್ರಣ ತಪ್ಪಿ ಮತ್ತೊಂದು ಬೈಕ್‌ಗೆ ಬಡಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದ ಹಿಂಬದಿ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಪುಂಜಾಲಕಟ್ಟೆಯ ಅತ್ತಾಜೆ ನಿವಾಸಿ ಜನಾರ್ಧನ (42) ಮೃತಪಟ್ಟವರೆಂದು ಗುರುತಿಸಲಾಗಿದೆ.
ಸತೀಶ್ ಎಂಬವರು ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ದನವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಸವಾರ ರಸ್ತೆಗೆ ಬಿದ್ದಿದ್ದರು.
ನಿಯಂತ್ರಣ ತಪ್ಪಿ ಬೈಕ್ ರಸ್ತೆಯ ತೀರಾ ಬಲ ಬದಿಗೆ ಬಂದು ಬೆಳ್ತಗಡಿ ಕಡೆಯಿಂದ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಆಬೈಕಿನ ಸವಾರ ಶಿವರಾಜ ಹಾಗೂ ಹಿಂಬದಿ ಸವಾರ ಜನಾರ್ಧನರವರು ರಸ್ತೆಗೆ ಬಿದ್ದಿದ್ದರು.
ಇದರಿಂದಾಗಿ ಜನಾರ್ಧನ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿತ್ತು. ಆದರೆ ಗಾಯಾಳು ಜನಾರ್ದನ ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.