ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ: ಕೆ. ಮಹಮ್ಮದ್ ಇಕ್ಬಾಲ್ನ ಸದಸ್ಯತ್ವ ರದ್ದು
Tuesday, August 26, 2025
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ಅವರ ಸದಸ್ಯತ್ವವನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ.
ಮಹಮ್ಮದ್ ಇಕ್ಬಾಲ್ ಅವರು 2024-25 ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲು ಮಾಡದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗದ ಆದೇಶದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 199ರ ಪ್ರಕರಣ 43(ಬಿ)(4)ರಡಿ ಇಕ್ಬಾಲ್ ಅವರನ್ನು ಗ್ರಾಮ ಪಂಚಾಯತ್ ಸದಸ್ಯತ್ವದಿಂದ ತೆಗೆದು ಹಾಕಿ ಹಾಗೂ ಅವರ ಸದಸ್ಯ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಿದೆ.
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಕೊಲೆ ಮಾಡಲಾಗಿತ್ತು. ಮಹಮ್ಮದ್ ಇಕ್ಬಾಲ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಳಿಕ ಪ್ರಕರಣದ ವಿಚಾರಣೆಯ ನೇತೃತ್ವ ವಹಿಸಿಕೊಂಡ ಎನ್ಐಎ ತನಿಖಾ ತಂಡ ಇಕ್ಬಾಲ್ ಅವರನ್ನು ಬಂಧಿಸಿದ್ದು, ಜೈಲಿನಲ್ಲಿದ್ದಾರೆ.