ಧರ್ಮಸ್ಥಳ ಪ್ರಕರಣ: ದೂರುದಾರನನ್ನು ತಿಮರೋಡಿ ಮನೆಗೆ ಕರೆತಂದ ಎಸ್‌ಐಟಿ

ಧರ್ಮಸ್ಥಳ ಪ್ರಕರಣ: ದೂರುದಾರನನ್ನು ತಿಮರೋಡಿ ಮನೆಗೆ ಕರೆತಂದ ಎಸ್‌ಐಟಿ


ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ವಶದಲ್ಲಿರುವ ದೂರುದಾರನನ್ನು ಮಂಗಳವಾರ ಸ್ಥಳ ಮಹಜರಿಗಾಗಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಕರೆತಂದಿದ್ದಾರೆ.

ದೂರುದಾರ ತಾನು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ್ದು, ಅದರಂತೆ ಎಸ್‌ಐಟಿ ಅಧಿಕಾರಿಗಳ ತಂಡವು ಇಂದು ಬೆಳಗ್ಗೆ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ತಿಮರೋಡಿ ಮತ್ತು ಅವರ ಸಹೋದರ ಮೋಹನ್ ಶೆಟ್ಟಿಯವರ ಮನೆಗೆ ಬಂದಿದ್ದಾರೆ.

ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರೆಂಟ್ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಜೊತೆಯಲ್ಲಿ ಕರೆದುಕೊಂಡು ತಿಮರೋಡಿ ಮನೆಗೆ ಬಂದಿದ್ದು, ಮಹಜರು ನಡೆಸುತ್ತಿದ್ದಾರೆ.

ಬುರುಡೆ ಪ್ರಕರಣದಲ್ಲಿ ಆರೋಪಿಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ತಿಂಗಳಿಂದ ಅಶ್ರಯ ನೀಡಿದ್ದರಿಂದ ಅದಕ್ಕೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಈ ದಾಳಿ ನಡೆಯುತ್ತಿದೆ ಎನ್ನಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article