ವಸಂತ ಗಿಳಿಯಾರ್ ವಿರುದ್ಧ ಎಫ್‌ಐಆರ್ ದಾಖಲು

ವಸಂತ ಗಿಳಿಯಾರ್ ವಿರುದ್ಧ ಎಫ್‌ಐಆರ್ ದಾಖಲು


ಬೆಳ್ತಂಗಡಿ: ಧರ್ಮ ಧರ್ಮಗಳ ನಡುವೆ, ಜಾತಿಗಳ ಮಧ್ಯೆ ದ್ವೇಷ ಹುಟ್ಟುವಂತೆ ಪ್ರಚೋದನಕಾರಿಯಾಗಿ ಮಾತನಾಡಿ ಅದನ್ನು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿದ್ದ ಬಗ್ಗೆ ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ನೀಡಿದ ದೂರಿನಂತೆ ಸೆಕ್ಷನ್ 196(1)(a), 3353(2) ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಶೇಖರ ಲಾಯಿಲ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು, ಬೆಂಗಳೂರಿನಲ್ಲಿ ನಡೆದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ಮಾತನಾಡಿದ ವಸಂತ ಗಿಳಿಯಾರ್ ಬೆಳ್ತಂಗಡಿ ಭಾಗದಲ್ಲಿ ಮಿಷನರಿಗಳ ಪ್ರಭಾವದಿಂದ ಹಿಂದುಗಳ ತುಳಸಿಕಟ್ಟೆಯನ್ನು ಒಡೆಸಿ ಅಲ್ಲಿ ಶಿಲುಬೆಯನ್ನು ಇಡಲಾಗಿತ್ತು. ಗ್ರಾಮಾಭಿವೃದ್ಧಿ ಯೋಜನೆ ಬಂದ ಬಳಿಕ ಶಿಲುಬೆಗಳನ್ನು ತೆಗೆದು ಮತ್ತೆ ತುಳಸಿಕಟ್ಟೆಗಳನ್ನು ಮರು ಸ್ಥಾಪಿಸಿದ್ದರು ಎಂಬುವುದಾಗಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. 

ಈ ಹೇಳಿಕೆಯಿಂದಾಗಿ ಧರ್ಮ ಧರ್ಮಗಳ ನಡುವೆ ಅಪನಂಬಿಕೆ ಸೃಷ್ಟಿಯಾಗಿ ಘರ್ಷಣೆಗೆ ಕಾರಣವಾಗುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದು, ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article