ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಆಗಮಿಸಿದ ಸುಜಾತಾ ಭಟ್
Tuesday, August 26, 2025
ಬೆಳ್ತಂಗಡಿ: ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಅವರ ತಾಯಿ ಸುಜಾತಾ ಭಟ್ ವಿಚಾರಣೆಗಾಗಿ ಇಂದು ಮುಂಜಾನೆ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರಾಗಿದ್ದಾರೆ.
ಬೆಂಗಳೂರಿನಿಂದ ಕಾರಿನಲ್ಲಿ ಇಂದು ಮುಂಜಾನೆ ೫ ಗಂಟೆ ಸುಮಾರಿಗೆ ಬೆಳ್ತಂಗಡಿಗೆ ಆಗಮಿಸಿದ ಸುಜಾತ ಭಟ್ ನೇರವಾಗಿ ಎಸ್‌ಐಟಿ ಕಚೇರಿಗೆ ತೆರಳಿದ್ದಾರೆ.
ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿ ಇಂದು ಸುಜಾತಾ ಭಟ್ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ. ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯಾಗಿದ್ದ ತನ್ನ ಮಗಳು ಅನನ್ಯಾ ಭಟ್ (20) ಇಪ್ಪತ್ತೆರಡು ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾಗಿ ಸುಜಾತಾ ಭಟ್ ಜುಲೈ 15 ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದ ಧರ್ಮಸ್ಥಳ ಪೊಲೀಸರು, ಪ್ರಕರಣವನ್ನು ಎಸ್‌ಐಟಿಗೆ ವರ್ಗಾಯಿಸಲಾಗಿತ್ತು.