ಎಸ್.ಬಿ. ನರೇಂದ್ರ ಕುಮಾರ್ ನಿಧನಕ್ಕೆ ಹೆಗ್ಗಡೆ ಸಂತಾಪ
Tuesday, August 5, 2025
ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಗಾಢ ಸಂತಾಪ ವ್ಯಕ್ತಪಡಿಸಿ, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.
ವಿದ್ಯಾರ್ಥಿಗಳಿಗೆ ಉತ್ತಮ ಕ್ರೀಡಾ ತರಬೇತಿ ನೀಡಿ ರಾಜ್ಯಮಟ್ಟದ ಕ್ರೀಡಾಪಟುಗಳನ್ನು ಅವರು ರೂಪಿಸಿದ್ದಾರೆ. ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದ ಅವರು ವಿದ್ಯಾರ್ಥಿಗಳಿಗೂ ಯಕ್ಷಗಾನದ ಬಗ್ಗೆ ತರಬೇತಿ ನೀಡಿ ಉದಯೋನ್ಮುಖ ಕಲಾವಿದರನ್ನು ರೂಪಿಸಿದ್ದಾರೆ.
ನಮ್ಮ ಕ್ಷೇತ್ರದ ವಿವಿಧ ಸಮಾರಂಭಗಳಲ್ಲಿ ಸ್ವಯಂಸೇವಕರಾಗಿ, ಸಂಘಟಕರಾಗಿ ಉತ್ತಮ ಸೇವೆ ನೀಡಿದ್ದಾರೆ ಎಂದು ತಿಳಿಸಿ, ಹೆಗ್ಗಡೆಯವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.