ಅಪಪ್ರಚಾರ ನಿಯಂತ್ರಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲ: ಬಿ.ವೈ. ವಿಜಯೇಂದ್ರ ಆರೋಪ

ಅಪಪ್ರಚಾರ ನಿಯಂತ್ರಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲ: ಬಿ.ವೈ. ವಿಜಯೇಂದ್ರ ಆರೋಪ


ಧರ್ಮಸ್ಥಳ: ಎಸ್.ಐ.ಟಿ. ತನಿಖೆಯ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಅದರೆ ಧರ್ಮಸ್ಥಳ ದೇವಸ್ಥಾನದ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್.ಐ.ಟಿ. ರಚನೆಯಾದಗಲೇ ಅದನ್ನು ಸ್ವಾಗತಿಸಿದ್ದೇವೆ ಎಂದ ಅವರು, ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳನ್ನು ಸಹಿಸಲು ಸಾಧ್ಯವಿಲ್ಲ. ಡಿ.ಕೆ. ಶಿವಕುಮಾ‌ರ್ ಅವರೇ ಈ ಬಗ್ಗೆ ಹೇಳಿದ್ದಾರೆ ಆದರೆ ಅಂತಹ ಶಕ್ತಿಗಳ ವಿರುದ್ಧ ಕ್ರಮಕ್ಕ ಸರಕಾರ ಯಾಕೆ ಮುಂದಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಈ ವೇಳೆ ಬಿಜೆಪಿ ನಾಯಕರಾದ ಸಿ.ಟಿ. ರವಿ, ಚಲವಾದಿ ನಾರಾಯಣ ಸ್ವಾಮಿ, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಉಮಾಥ ಕೋಟ್ಯಾನ್, ಭರತ್ ಶೆಟ್ಟಿ, ಪ್ರತಾಪ ಸಿಂಹ ನಯಕ್, ಯಶ್ ಪಾಲ್ ಸುವರ್ಣ ಹಾಗೂ ಇತರರು ಇದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article