ಧರ್ಮಸ್ಥಳ ಕೇಸ್‌: ಮಾಸ್ಕ್ ಮ್ಯಾನ್ ಅನಾಮಿಕ ದೂರುದಾರನನ್ನು ಬಂಧಿಸಿದ ಎಸ್‌ಐಟಿ

ಧರ್ಮಸ್ಥಳ ಕೇಸ್‌: ಮಾಸ್ಕ್ ಮ್ಯಾನ್ ಅನಾಮಿಕ ದೂರುದಾರನನ್ನು ಬಂಧಿಸಿದ ಎಸ್‌ಐಟಿ


ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದ ಮಹತ್ವದ ಬೆಳವಣಿಗೆಯಲ್ಲಿ ಎಸ್‌ಐಟಿ ಪೊಲೀಸರು ಅನಾಮಿಕ ದೂರುದಾರ ಮಾಸ್ಕ್ ಹಾಕಿಕೊಂಡು ಓಡಾಡುತ್ತಿದ್ದ ವ್ಯಕ್ತಿಯನ್ನು ಶನಿವಾರ ಬಂಧಿಸಿದ್ದಾರೆ. ಆತನ ಹೆಸರು, ಊರು ಸಹ ರಿವೀಲ್ ಆಗಿದೆ.

ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಅನಾಮಿಕ ದೂರುದಾರನನ್ನು ಎಸ್‌ಐಟಿ ಪೊಲೀಸರು ವಿಚಾರ ನಡೆಸುತ್ತಿದ್ದರು. ಶನಿವಾರ ಮುಂಜಾನೆ 5 ಗಂಟೆಯ ತನಕ ವಿಚಾರಣೆ ನಡೆದಿತ್ತು. ಇಂದು ಬೆಳಗ್ಗೆ ಮಾಸ್ಕ್ ಹಾಕಿಕೊಂಡು ಓಡಾಟ ನಡೆಸುವ ದೂರುದಾರನನ್ನು ಬಂಧಿಸಲಾಗಿದೆ.

ಸದ್ಯ ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು, ಮಾಸ್ಕ್ ಮ್ಯಾನ್ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಬೆಳ್ತಂಗಡಿ ಕೋರ್ಟ್‌ಗೆ ಆತನನ್ನು ಹಾಜರು ಪಡಿಸಲಿದ್ದಾರೆ. ಅನಾಮಿಕ ದೂರುದಾರ ವ್ಯಕ್ತಿಯ ಹೆಸರು ನಂಜಯ್ಯ ಎಂದು ಬಹಿರಂಗವಾಗಿದೆ, ಆತ ಮೂಲತಃ ಮಂಡ್ಯದವನು.

ನಂಜಯ್ಯನನ್ನು ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶಕ್ಕೆ ಕೇಳುವ ನಿರೀಕ್ಷೆ ಇದೆ. ಆತ ನೀಡಿರುವ ದೂರಿನ ಸತ್ಯಾಸತ್ಯತೆ ಬಗ್ಗೆಯೇ ಪೊಲೀಸರಿಗೆ ಅನುಮಾನವಿದ್ದು, ಆದ್ದರಿಂದ ವಿಚಾರಣೆ ತೀವ್ರಗೊಳಿಸಿದ್ದಾರೆ.

ಕರ್ನಾಟಕ ಸರ್ಕಾರ ಜುಲೈ 19ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ಇತರ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿತ್ತು.

ಅನಾಮಿಕ ದೂರುದಾರ ನೀಡಿದ ದೂರಿನ ಅನ್ವಯ ಎಸ್‌ಐಟಿ ಧರ್ಮಸ್ಥಳದಲ್ಲಿ ತನಿಖೆ ಮಾಡುತ್ತಿದೆ. ದೂರುದಾರ ತೋರಿಸಿದ ಜಾಗದಲ್ಲಿ ಅಸ್ಥಿಪಂಜರಕ್ಕಾಗಿ ಹುಡುಕಾಟ ನಡೆಸುತ್ತಿತ್ತು. ಆದರೆ ಕಳೆದ ವಾರದ ಉತ್ಪನ್ನ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article