
ದೀಕ್ಷಾ ಭೂಮಿಗೆ ಯಾತ್ರೆಗೆ ಬಸ್ ವ್ಯವಸ್ಥೆ
Wednesday, August 27, 2025
2025-26ನೇ ಸಾಲಿನಲ್ಲಿ ಅಕ್ಟೋಬರ್ 2 (ವಿಜಯದಶಮಿ) ರಂದು ನಾಗಪುರ ದೀಕ್ಷಾಭೂಮಿಯಲ್ಲಿ ನಡೆಯುವ ದಮ್ಮ ಪ್ರವರ್ತನ ದಿನದ ಕಾರ್ಯಕ್ರಮಕ್ಕೆ ಸೆಪ್ಟಂಬರ್ 30 ರಿಂದ ಅಕ್ಟೋಬರ್ 4 ರವರೆಗೆ ಕರ್ನಾಟಕ ರಾಜ್ಯದಿಂದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳನ್ನು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ನಾಗಪುರ ದೀಕ್ಷಾಭೂಮಿಗೆ ಯಾತ್ರೆ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ.
ಸಾರಿಗೆ ವ್ಯವಸ್ಥೆ, ರೈಲು ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸುವ ಯೋಜನೆಯಡಿ 2025-26ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿಗೆ ಭೇಟಿ ನೀಡಲಿರುವ ಯಾತ್ರಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು, ದೀಕ್ಷಾಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ವೆಬ್‌ಸೈಟ್ ಲಿಂಕ್ (<https://swdservices.karnataka.gov.in/>) ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೆಪ್ಟಂಬರ್ 9ರವರೆಗೆ ನಿಗದಿಪಡಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.