ಕಡಬ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ!: ಶಾಸಕ ಮಂಜುನಾಥ ಭಂಡಾರಿ ಹರ್ಷ

ಕಡಬ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ!: ಶಾಸಕ ಮಂಜುನಾಥ ಭಂಡಾರಿ ಹರ್ಷ


ಕಡಬ: ಭಾರೀ ಕುತೂಹಲ ಕೆರಳಿಸಿದ್ದ ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಚುನಾವಣೆಯು ಯಶಸ್ವಿಯಾಗಿದ್ದು ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. 13 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲುವ ಮೂಲಕ ಅಧಿಕಾರದ ಗದ್ದುಗೆಯೇರಿದೆ. 

ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹುಮತ ಪಡೆದಿದ್ದಾರೆ. 

ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ಶ್ರಮಿಸಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಉಸ್ತುವರಿಗಳಾದ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮೊಹಮ್ಮದ್, ದಕ್ಷಿಣ ಕನ್ನಡ ಜಿಲ್ಲಾ RGPRS ಅಧ್ಯಕ್ಷರಾದ ಸುಭಾಷ್ಚಂದ್ರ ಶೆಟ್ಟಿ, ಕಡಬ ಬ್ಲಾಕ್ ಅಧ್ಯಕ್ಷ ಅಭಿಲಾಷ್, ಜಿಲ್ಲೆಯ ಶಾಸಕರು, ಲೋಕಸಭಾ ಮತ್ತು  ವಿಧಾನಸಭಾ ಅಭ್ಯರ್ಥಿಗಳು ಹಾಗೂ ಎಲ್ಲಾ ಹಿರಿಯ ನಾಯಕರುಗಳು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ನೇಮಿಸಲ್ಪಟ್ಟ ವೀಕ್ಷಕರು, ಬ್ಲಾಕ್ ಅಧ್ಯಕ್ಷರು, ಅಭ್ಯರ್ಥಿಗಳು ಬ್ಲಾಕ್ ಕೋರ್ ಕಮಿಟಿ ಸದಸ್ಯರು, ಮಾಜಿ ಬ್ಲಾಕ್ ಅಧ್ಯಕ್ಷರಿಗೆ ಶಾಸಕ ಮಂಜುನಾಥ ಭಂಡಾರಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article