
ಚೆಸ್ ಸ್ಪರ್ಧೆ: ಜಿಲ್ಲಾ ಮಟ್ಟಕ್ಕೆ ಆಯ್ಕೆ
Tuesday, August 5, 2025
ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ರಾಮ್‌ಸನ್ ಸರ್ಕಾರಿ ಪ್ರೌಢಶಾಲೆ ಕಂಡ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಎಸ್. ವಿ. ಅಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀಲತಾ ನಾಯಕ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.