
ಬೈಕ್ ಅಪಘಾತ: ಚಿಕಿತ್ಸೆ ಫಲಿಸದೇ ಗಾಯಳು ಶಿಕ್ಷಕ ಸಾವು
Tuesday, August 12, 2025
ಕುಂದಾಪುರ: ಬೈಕ್ ಹಾಗೂ ಲಾರಿ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆ ಸೇರಿದ್ದ ಬೈಕ್ ಸವಾರ ಕೋಟ ಮಣೂರು ಪಡುಕರೆ ನಿವಾಸಿ ಶಿಕ್ಷಕ ಸಂತೋಷ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಆ.8 ರಂದು ತೆಕ್ಕಟ್ಟೆಯಿಂದ ಕೋಟ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇವರು ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಕೋಟ ಮಣೂರಿನಲ್ಲಿ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಿತ ರಸ್ತೆಗೆ ಬಿದ್ದು ತಲೆ ಮತ್ತು ಮುಖ ಕೈಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿತ್ತು. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಲಾರಿ ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದು, ಕೋಟ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.