123 ಕೆಜಿ ಗಾಂಜಾ ವಶ: ಮೂವರ ಬಂಧನ

123 ಕೆಜಿ ಗಾಂಜಾ ವಶ: ಮೂವರ ಬಂಧನ


ಮಂಗಳೂರು: ಸಿಸಿಬಿ ಪೊಲೀಸ್ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆಯ ಭಾಗವಾಗಿ ಗುರುವಾರ ಬೃಹತ್ ಪ್ರಮಾಣದ 123 ಕೆ.ಜಿ. ಗಾಂಜಾ, ಸಾಗಾಟ ಮಾಡುತ್ತಿದ್ದ ವಾಹನಗಳ ಸಹಿತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು, ಮೂಡಬಿದಿರೆಯ ಬೆಳುವಾಯಿಯ ಕಾಂತಾವರ ಕ್ರಾಸ್‌ನ ಮಠದಕೆರೆ ಎಂಬಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಮೇತ 2 ವಾಹನಗಳನ್ನು ಪತ್ತೆಹಚ್ಚಿದ್ದಾರೆ.


ಕಾಸರಗೋಡು ನಿವಾಸಿಗಳಾದ ಮಸೂದ್ ಎಂ.ಕೆ. (45) ಮೊಹಮ್ಮದ್ ಆಶಿಕ್ (24) ಮತ್ತು ಸುಬೇರ್ (30) ಎಂಬುವವರು ಬಂಧಿತರು.


ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು, 5 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸೊತ್ತುಗಳ ಒಟ್ಟು ಮೌಲ್ಯ 46 ಲಕ್ಷದ 20 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article