ಸುಹಾಸ್‌ ಶೆಟ್ಟಿಹತ್ಯೆ ಪ್ರಕರಣ 14 ಕಡೆಗಳಲ್ಲಿ ಎನ್‌ಐಎ ತನಿಖೆ

ಸುಹಾಸ್‌ ಶೆಟ್ಟಿಹತ್ಯೆ ಪ್ರಕರಣ 14 ಕಡೆಗಳಲ್ಲಿ ಎನ್‌ಐಎ ತನಿಖೆ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಶ್‌ ಶೆಟ್ಟಿಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶನಿವಾರ ಬಜ್ಪೆ ಮತ್ತು ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಗಳ 14 ಕಡೆಗಳಲ್ಲಿ ಏಕಕಾಲದಲ್ಲಿ ತನಿಖೆ ನಡೆಸಿದ್ದಾರೆ.

ಈ ಪ್ರಕರಣದಲ್ಲಿ ಬಂಧಿತ ಹೆಚ್ಚಿನ ಆರೋಪಿಗಳ ನಿವಾಸಗಳು ಬಜ್ಪೆ ಮತ್ತು ಸುರತ್ಕಲ್‌ ಪರಿಸರದಲ್ಲಿವೆ. ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ 10 ಕಡೆ ಹಾಗೂ ಸುರತ್ಕಲ್‌ನ 4 ಕಡೆ ದಾಳಿ ನಡೆಸಿದ್ದಾರೆ. ಅಲ್ಲಿ ಮನೆಯವರೊಂದಿಗೆ ಆರೋಪಿಗಳಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಿದ್ದಾರೆ.

ಘಟನೆ ನಡೆದ ಸಂದರ್ಭ ಮೊಬೈಲ್‌ನಲ್ಲಿ ಚಿತ್ರೀಕರಣ ನಡೆಸಿದ ಕಿನ್ನಿಪದವುನಲ್ಲಿರುವ ವಸತಿ ಸಮುಚ್ಛಯಕ್ಕೆ ಭೇಟಿ ನೀಡಿದ ಅಧಿಕಾರಿಗಳು ಅಲ್ಲಿಯೂ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಘಟನಾ ಸ್ಥಳದ ಪರಿಸರದಲ್ಲಿದ್ದ ಅಂಗಡಿ ಮಾಲೀಕರಿಂದಲೂ ವಿವರ ಪಡೆದಿದ್ದಾರೆ.

 ಮಂಗಳೂರು ನಗರ ಪೊಲೀಸರು ಆರಂಭದಲ್ಲಿ ನಡೆಸಿದ ತನಿಖಾ ವರದಿಯನ್ನು ಎನ್‌ಐಎ ಅಧಿಕಾರಿಗಳು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಎರಡು ವರ್ಷಗಳ ಹಿಂದೆ ಸುರತ್ಕಲ್‌ನಲ್ಲಿ ನಡೆದಿದ್ದ ಪಾಝಿಲ್‌ ಕೊಲೆ ಪ್ರಕರಣಕ್ಕೆ ಪ್ರತೀಕಾರವಾಗಿ ಆತನ ಸಹೋದರ ಸಹಚರರೊಂದಿಗೆ ಸೇರಿಕೊಂಡು ಹತ್ಯೆ ನಡೆಸಿರುವುದು ಪೊಲೀಸ್‌ ತನಿಖೆಯಿಂದ ತಿಳಿದು ಬಂದಿತ್ತು.

ಸುಹಾಸ್‌ ಶೆಟ್ಟಿತನ್ನ ಸಹಚರರೊಂದಿಗೆ ಮೇ 1ರಂದು ಕಾರಿನಲ್ಲಿ ತೆರಳುತ್ತಿದ್ದಾಗ ಬಜ್ಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಕಾರು ಹಾಗೂ ಪಿಕಪ್‌ ವಾಹನಗಳಲ್ಲಿ ಬಂದ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿತಲವಾರುಗಳಿಂದ ಕಡಿದು ಸುಹಾಸ್‌ ಶೆಟ್ಟಿಅವರನ್ನು ಹತ್ಯೆ ಮಾಡಿತ್ತು.

ಪರಿಣಾಮ ಮರುದಿನ ದಕ್ಷಿಣ ಜಿಲ್ಲಾ ಬಂದ್‌ ಸೇರಿದಂತೆ ಅಲ್ಲಲ್ಲಿ ಬಸ್ಸಿಗೆ ಕಲ್ಲೆಸೆತ ಮತ್ತಿತರ ಘಟನೆಗಳು ನಡೆದಿದ್ದವು. ಈ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸುವಂತೆ ಬಿಜೆಪಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು ಅಮಿತ್‌ ಷಾ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಈ ಕೊಲೆಯಲ್ಲಿ ನಿಷೇಧಿತ ಸಂಘಟನೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಶಾಮೀಲಾಗಿರುವ ಆತಂಕವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಜೂ.7ರಂದು ಕೇಂದ್ರ ಗೃಹ ಸಚಿವಾಲಯವು ಎನ್‌ಐಎಗೆ ವಹಿಸಿ ಆದೇಶ ಹೊರಡಿಸಿತ್ತು. ಪ್ರಸ್ತುತ ಎನ್‌ಐಎ ತನಿಖೆ ಚುರುಕುಗೊಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article