ಸಿಎಂ 24 ಮಂದಿಯನ್ನು ಕೊಲೆ ಮಾಡಿದ್ದಾರೆ: ವೀಡಿಯೋದ ವಾಸ್ತವವೇನು..?
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಜನರನ್ನು ಕೊಲೆ ಮಾಡಿದ್ದಾರೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ ಎನ್ನಲಾದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರಕಾರ ತಿಳಿಸಿದೆ.
ವಾಸ್ತವವೇನು..?
ಸಿದ್ದರಾಮಯ್ಯ 24 ಜನರನ್ನು ಕೊಲೆ ಮಾಡಿದ್ದಾರೆ. ಸಿದ್ದರಾಮಯ್ಯ ತಕ್ಷಣ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಬೇಕು” ಎಂದು ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ 24 ಕೊಲೆಗಳನ್ನು ಮಾಡಿದ್ದಾರೆಂದು ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ ಎನ್ನಲಾದ ವೀಡಿಯೊ ವಾಸ್ತವಾಗಿ ಬಿಜೆಪಿಯ ಹಾಲಿ ಶಾಸಕ ಹರೀಶ್ ಪೂಂಜಾ ಚುನಾವಣಾ ಸಂದರ್ಭ ಪ್ರಸ್ತಾಪಿಸಿದ್ದ ವೀಡಿಯೋವನ್ನು ಎಡಿಟ್ ಮಾಡಿ ವೈರೆಲ್ ಮಾಡಲಾಗಿದೆ ಎನ್ನಲಾಗಿದೆ..
ಈ ವೀಡಿಯೊ 2023ರ ಮೇ 24ರದ್ದಾಗಿದ್ದು, ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿಯಲ್ಲಿ ಮಾತನಾಡುತ್ತಾ ‘ಸತ್ಯಣ್ಣ, 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿರುವ ಸಿದ್ದರಾಮಯ್ಯ ಅವರಿಗೆ ಮತ ಕೇಳಿದ್ದೀರಲ್ಲಾ? ಬಜರಂಗದಳನ್ನು ಬ್ಯಾನ್ ಮಾಡುತ್ತೇನೆ ಎಂದ ಕಾಂಗ್ರೆಸ್‌ಗೆ ನೀವು ಮತ ಕೇಳಿದ್ದೀರಲ್ಲ, ಇಂದು ಬೆಳ್ತಂಗಡಿಯ ಜನ ಸತ್ಯಣ್ಣ ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಕೇಳಿದ್ದಾರೆ ಎಂದು ಹೇಳುವುದು ನೈಜ ವೀಡಿಯೊದಲ್ಲಿ ಸೆರೆಯಾಗಿದೆ.
ಈ ಬಗ್ಗೆ ನಮಿತಾ ಕೆ.ಪೂಜಾರಿ ಎಂಬವರ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಾಗಿತ್ತು.