'ಕುಡ್ಲದ ಪಿಲಿ ಪರ್ಬ-ಸೀಸನ್ 4'ರ ಆಮಂತ್ರಣ ಪತ್ರಿಕೆ ಬಿಡುಗಡೆ
Saturday, August 23, 2025
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸೆ.30 ರಂದು ನಡೆಯಲಿರುವ 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಇದರ ಆಮಂತ್ರಣ ಪತ್ರಿಕೆಯನ್ನು ಇಂದು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು.
ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧರ್ ಶೆಟ್ಟಿ ಅವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಸೆ.30 ರಂದು ನಡೆಯಲಿದೆ. ಪ್ರತಿಷ್ಠಾನದವು ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದ ಆಯೋಜನೆಗೆ ಈಗಾಗಲೇ ಪೊಲೀಸ್ ಹಾಗೂ ಸಂಬಂಧಿಸಿದ ಅಧಿಕಾರಿಗಳಲ್ಲಿ ಅನುಮತಿ ಪಡೆದಿದ್ದು, ಪೊಲೀಸ್ ಅಧಿಕಾರಿಗಳೊಂದಿಗೆ ಶಾಸಕರು ಮತ್ತು ಸಂಸದರು ಮಾತನಾಡಿದ್ದಾರೆ. ಸೌಂಡ್ ಮೊದಲಾದ ಸಮಸ್ಯೆಗಳು ಬಾರದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಸುದ್ದಿಗೋಷ್ಠಿಯಲ್ಲಿ ಗೌರವ ಅಧ್ಯಕ್ಷ ದಿವಾಕರ್ ಪಾಂಡೇಶ್ವರ್, ಪ್ರಧಾನ ಕಾರ್ಯದರ್ಶಿ ಶಾನ್, ಪ್ರಮುಖರಾದ ಜಗದೀಶ್ ಕದ್ರಿ, ಚೇತನ್ ಕಾಮತ್, ಅಶ್ವಿತ್ ಕೊಟ್ಟಾರಿ ಮತ್ತಿತರರು ಉಪಸ್ಥಿತರಿದ್ದರು.