
ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 5 ಮಂದಿ ಮೃತ್ಯು: ಹಲವರಿಗೆ ಗಾಯ
Thursday, August 28, 2025
ಮಂಗಳೂರು: ಇಲ್ಲಿನ ಉಳ್ಳಾಲ ಹತ್ತಿರದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ ಐವರು ಮೃತಪಟ್ಟಿದ್ದಾರೆ.
ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎನ್ನಲಾಗುತ್ತಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಬಸ್ಸು ಕಾಸರಗೋಡಿನಿಂದ ಮಂಗಳೂರು ಬಸ್ ನಿಲ್ದಾಣಕ್ಕೆ ಬರುತ್ತಿತ್ತು. ಅಪಘಾತದ ರಭಸಕ್ಕೆ ಕಾಸರಗೋಡು ಕಡೆಗೆ ಮುಖಮಾಡಿ ನಿಂತಿದೆ. ಈ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.