ತಲಪಾಡಿಯಲ್ಲಿ ಬಸ್ ಢಿಕ್ಕಿಯಾಗಿ 6 ಮಂದಿ ಮೃತ್ಯು: ಮೃತರ ಕುಟುಂಬಸ್ಥರಿಗೆ ಸ್ಪೀಕರ್ ಸಾಂತ್ವನ
Friday, August 29, 2025
ಮಂಗಳೂರು: ತಲಪಾಡಿ ರಾಷ್ಟ್ರೀಯ ಹೆದ್ದಾರಿ 66ಯಲ್ಲಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದು, ಈ ಘಟನೆಗೆ ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಸಂತಪ ತಿಳಿಸಿದ್ದಾರೆ.
ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವ ಅವರು ಆಸ್ಪತ್ರೆಗೆ ಧಾವಿಸಿ ಬಂದು ಆಸ್ಪತ್ರೆಯೆ ವೈದ್ಯರೊಂದಿಗೆ ಮಾತುಕತೆ ನಡೆಸಿ ಆದಷ್ಟು ಬೇಗನೇ ಪೋಸ್ಟ್ ಮಾರ್ಟಂ ಹಾಗೂ ಇತರ ಕಾರ್ಯಗಳನ್ನು ಪೂರೈಸಿ ಸಂಬಂಧಪಟ್ಟ ಕುಟುಂಬದವರಿಗೆ ಮೃತದೇಹಗಳನ್ನು ಹಸ್ತಾಂತರಿಸುವ ಕುರಿತು ಸೂಚನೆ ನೀಡಿದರು.
ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸ್ಪೀಕರ್ ಯು.ಟಿ. ಖಾದರ್ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ ಅವರು ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಸೂಚನೆ ನೀಡಿ ಹಾಗೂ ಮೃತರ ಕುಟುಂಬಕ್ಕೆ ಕೆಎಸ್‌ಆರ್‌ಟಿಸಿ ವತಿಯಿಂದ ಪರಿಹಾರ ಒದಗಿಸಬೇಕೆಂದು ಸ್ಪೀಕರ್ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.