ಸೆಪ್ಟೆಂಬರ್ 7,8,9 ಉದ್ಯೋಗದ ಹಕ್ಕಿಗಾಗಿ ಡಿವೈಎಫ್ಐನಿಂದ ಜಿಲ್ಲಾದ್ಯಂತ ಯುವಜನ ಜಾಥಾ: ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಪ್ರೊ. ನರೇಂದ್ರ ನಾಯಕ್ ಆಯ್ಕೆ
ಈ ಜಾಥಾ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಆ.7 ರಂದು ನಗರದ ವಿಕಾಸ ಕಚೇರಿಯಲ್ಲಿ ಸ್ವಾಗತ ಸಮಿತಿ ರಚನಾ ಸಭೆ ನಡೆಯಿತು.
ಇತ್ತಿಚೇಗೆ ಖಾಸಗೀ ರಂಗದ ಉದ್ದಿಮೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ಒದಗಿಸುವ 'ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024" ಯನ್ನು ಜಾರಿಮಾಡಲು ಹೊರಟ ಸಂದರ್ಭದಲ್ಲಿ ಕಾರ್ಪೊರೇಟ್ ಕಂಪೆನಿ ಧಣಿಗಳ ವಿರೋಧಕ್ಕೆ ಮಣಿದು ಈ ಯೋಜನೆಯನ್ನೇ ಕೈಬಿಟ್ಟಿರುವ ನಡೆಯಿಂದ ಸರಕಾರಕ್ಕೆ ರಾಜ್ಯದ ಯುವಜನರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಎಷ್ಟು ಆಸಕ್ತಿಯನ್ನು ಹೊಂದಿದೆ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆ. ಈ ಹಿನ್ನಲೆಯಲ್ಲಿ ಡಿವೈಎಫ್ಐ ಉದ್ಯೋಗ ಪಡೆಯುವುದು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಬೇಕು ಎಂಬ ಆಶಯದಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯಾಗಬೇಕು. ಸ್ಥಳೀಯ ಯುವಜನರಿಗೆ ಉದ್ಯೋಗದಲ್ಲಿ ದೊಡ್ಡ ಪಾಲು ಸಿಗಬೇಕು ಎಂಬ ಪ್ರಧಾನ ಬೇಡಿಕೆಯನ್ನು ಮುಂದಿಟ್ಟು ಯುವಜನರ ಬೃಹತ್ ಆಂದೋಲನವನ್ನು ಕೈಗೆತ್ತಿಕೊಂಡಿದೆ ಎಂದರು.
ವೇದಿಕೆಯಲ್ಲಿ ವಿಚಾರವಾದಿ ಪ್ರೊ. ನರೇಂದ್ರ ನಾಯಕ್, ದಲಿತ ಸಂಘರ್ಷ ಸಮಿತಿಯ ಹಿರಿಯ ನೇತಾರ ಎಂ.ದೇವದಾಸ್, ಡಿವೈಎಫ್ಐ ಜಿಲ್ಲಾ ಮುಖಂಡರಾದ ನಿತಿನ್ ಕುತ್ತಾರ್, ತಯ್ಯೂಬ್ ಬೆಂಗರೆ, ನವೀನ್ ಕೊಂಚಾಡಿ ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ವಹಿಸಿದ್ದರು.
ಸಭೆಯಲ್ಲಿ ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಕಾರ್ಮಿಕ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ವಸಂತ ಆಚಾರಿ, ಜೆ ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೊಟ್ಟು, ಸದಾಶಿವದಾಸ್, ಯೋಗೀಶ್ ಜಪ್ಪಿನಮೊಗರು, ವಾಸುದೇವ ಉಚ್ಚಿಲ, ಡಾ ಕೃಷ್ಣಪ್ಪಕೊಂಚಾಡಿ, ಡಾ ಜೀವನ್ ರಾಜ್, ಆದಿವಾಸಿ ಸಂಘಟನೆಯ ಕರಿಯ ಕೆ, ಲಕ್ಷ್ಮಣ್ ವಾಮಂಜೂರು, ಶ್ಯಾಮ್ ಸುಂದರ್, ಮೈಕಲ್ ಡಿಸೋಜ, ಮದರ್ ತೆರೆಸಾ ವಿಚಾರ ವೇದಿಕೆಯ ಡೋಲ್ಫಿ ಡಿಸೋಜ, ಜನವಾದಿ ಮಹಿಳಾ ಸಂಘಟನೆಯ ಪ್ರಮಿಳಾ ಶಕ್ತಿನಗರ, ಪ್ರಮೀಳಾ ದೇವಾಡಿಗ, ಪ್ರಮೋದಿನಿ, ಯೋಗಿತಾ, ಸುನಂದಾ ಕೊಂಚಾಡಿ, ರೈತ ಸಂಘದ ಕೃಷ್ಣಪ್ಪ ಸಾಲ್ಯಾನ್, ವಿದ್ಯಾರ್ಥಿ ಸಂಘಟನೆಯ ವಿನುಶ ರಮಣ, ಬ್ಯಾಂಕ್ ನೌಕರರ ಸಂಘಟನೆಯ ಪುರುಷೋತ್ತಮ, ಬಿ.ಎನ್ ದೇವಾಡಿಗ, ನಾಗೇಶ್, ಡಿವೈಎಫ್ಐ ನ ರಜಾಕ್ ಮುಡಿಪು, ಅಶ್ರಫ್ ಹರೇಕಳ, ಮಾದುರಿ ಬೋಳಾರ, ಸನೀಲ್ ತೇವುಲ, ಜಗದೀಶ್ ಬಜಾಲ್ , ಚರಣ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಈ ವೇಳೆ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಪ್ರೋ ನರೇಂದ್ರ ನಾಯಕ್, ಕಾರ್ಯಾದ್ಯಕ್ಷರಾಗಿ ಮಂಜುಳಾ ನಾಯಕ್, ಅಧ್ಯಕ್ಷರಾಗಿ ಬಿ.ಕೆ ಇಮ್ತಿಯಾಜ್, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಬಜಾಲ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೋಜ್ ವಾಮಂಜೂರು, ಕೋಶಾಧಿಕಾರಿಯಾಗಿ ರಿಜ್ವಾನ್ ಹರೇಕಳ ಅವರನ್ನು ಆಯ್ಕೆ ಮಾಡಲಾಯಿತು 150ಕ್ಕೂ ಮಿಕ್ಕಿ ಸದಸ್ಯರ ಸಮಿತಿಯನ್ನು ರಚಿಸಲಾಯಿತು.
ಸಭೆಯಲ್ಲಿ ಡಿವೈಎಫ್ಐ ಜಿಲ್ಲಾ ಕೋಶಾಧಿಕಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
