ರಥಬೀದಿ ಕಾಲೇಜಿನಲ್ಲಿ ಸಂಭ್ರಮದ 79ನೇ ಸ್ವಾತಂತ್ರ್ಯೋತ್ಸವ
Friday, August 15, 2025
ಮಂಗಳೂರು: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ಹಕ್ಕ ಮತ್ತು ಕರ್ತವ್ಯಗಳ ಬಗ್ಗೆ ಅರಿತು ಜವಾಬ್ದಾರಿಯುತ ಪ್ರಜೆಗಳಾಗಿ ಪ್ರಜೆಗಳಾಗಿ ಬಾಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ದೇಶಭಕ್ತಿಗೀತೆಯಲ್ಲಿ ವಿಜೇತರಾದ ದ್ವಿತೀಯ ಬಿಬಿಎ ಪ್ರಥಮ ಹಾಗೂ ಪ್ರಥಮ ಬಿಎಸ್ಸಿ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನವನ್ನು ವಿತರಿಸಲಾಯಿತು.
ತೃತೀಯ ಬಿಎ ವಿದ್ಯಾರ್ಥಿನಿ ಅಕ್ಷರ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರಾಣಿಶಾಸ್ತ್ರ ವಿಭಾಗದ ಡಾ. ಅಶೋಕ್ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಅಪರ್ಣ ಆಳ್ವ ನಿರೂಪಿಸಿದರು. ಇತಿಹಾಸ ವಿಭಾಗದ ಜ್ಯೋತಿ ಪಿ. ಅವರು ವಂದಿಸಿದರು.

