
ಅಟಲ್ ಸೇವಾ ಕೇಂದ್ರದಲ್ಲಿ ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ಮಾಸಿಕ ಸಭೆ
Friday, August 1, 2025
ಮಂಗಳೂರು: ಬಿಜೆಪಿ ದ.ಕ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಶಾನವಾಜ್ ಅವರ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರವಾಸದ ಸಂದರ್ಭದಲ್ಲಿ ನಗರದ ಅಟಲ್ ಸೇವಾ ಕೇಂದ್ರದಲ್ಲಿ ಮಂಡಲದ ಮಾಸಿಕ ಸಭೆಯು ನಡೆಯಿತು.
ಸಲೀಂ ಬೆಂಗ್ರೆಯವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯದರ್ಶಿಗಳಾದ ಜೆಸ್ಸೆಲ್ ಡಿಸೋಜಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಫೆಡ್ರಿಕ್ ಪೌಲ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಮೋರ್ಚಾದ ಪ್ರಭಾರಿ ರಘುವೀರ್ ಬಾಬುಗುಡ್ಡ, ಮೋರ್ಚಾದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಉದಯ್ ಡಿಸೋಜಾ ಹಾಗೂ ಅರ್ಶದ್ ಪೋಪಿ ಸೇರಿದಂತೆ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.