
ರಸ್ತೆ ಅಗಲೀಕರಣಕ್ಕೆ ಹಾಗೂ ಕಾಂಕ್ರೀಟೀಕರಣಕ್ಕೆ ಶಾಸಕ ಕಾಮತ್ ಅವರಿಂದ ಭೂಮಿ ಪೂಜೆ
Sunday, August 10, 2025
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಬಜಾಲ್ ಬಳಿ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ಅಗಲೀಕರಣ ಹಾಗೂ ಕಾಂಕ್ರೀಟೀಕರಣದ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.
ಬಳಿಕ ಅವರು ಮಾತನಾಡಿ, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂ. ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಭೂಮಿ ಪೂಜೆಯು ನೆರವೇರಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ ಎಂದರು.
ಮಂಡಲದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಮುಖರಾದ, ವಿಜಯ್ ಕುಮಾರ್ ಶೆಟ್ಟಿ, ಪ್ರವೀಣ್ ನಿಡ್ಡೇಲ್, ರಾಮ್ ಪ್ರಸಾದ್, ನವೀನ್ ಶೆಣೈ, ಹರೀಶ್, ಪುರುಷೋತ್ತಮ, ವೀರೇಂದ್ರ, ಸುಕೇಶ್, ಸುನಿಲ್, ಉಮೇಶ್, ಮೋಹನ್ ದಾಸ್, ವೇಣು ಗೋಪಾಲ್, ಸುಧಾಕರ್, ಮುಕೇಶ್, ವಾರ್ಡಿನ ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.