ಕಳ್ಳತನಕ್ಕೆ ಯತ್ನ ಪ್ರಕರಣ: ತಲೆಮರೆಸಿಕೊಂಡ ಆರೋಪಿಯ ಬಂಧನ

ಕಳ್ಳತನಕ್ಕೆ ಯತ್ನ ಪ್ರಕರಣ: ತಲೆಮರೆಸಿಕೊಂಡ ಆರೋಪಿಯ ಬಂಧನ


ಮಂಗಳೂರು: ದೇರಳಕಟ್ಟೆಯ ಮುತ್ತೂಟ್ ಪೈನಾನ್ಸ್ ಬ್ಯಾಂಕ್‌ನ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡು ಜಿಲ್ಲೆಯ ವೆಲ್ಲರಿಕುಂಡು ತಲೂಕಿನ ಅರಿಕಾರ ನಿವಾಸಿ ಅಬ್ದುಲ್ ಲತೀಫ್ ಯಾನೆ ಲತೀಫ್ (47) ಎಂಬಾತನನ್ನು ಬಂಧಿಸಲಾಗಿದೆ.

ಪ್ರಕರಣದ ವಿವರ:

29-03-2025 ರಂದು ರಾತ್ರಿ ಸಮಯ ದೇರಳಕಟ್ಟೆ ಪರಿಸರದಲ್ಲಿರುವ ಹೆಚ್.ಎಮ್. ಕಾಂಪ್ಲೇಕ್ಸ್‌ನ ಮುತ್ತೂಟ್ ಪೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಹೂಟರ್‌ನ ಕೇಬಲ್ ಅನ್ನು ತುಂಡು ಮಾಡಿ ಪೈನಾನ್ಸ್ ಕಂಪನಿಯಲ್ಲಿ ಕಳವು ಮಾಡಲು ಪ್ರಯತ್ನ ಮಾಡಿರುವುದಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಈಗಾಗಲೇ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಞಿಗಾಡ್‌ನ ಆರ್ಷದ್ ಎಂಬಾತರು ಬಂಧಿಸಲಾಗಿದೆ. ಅಬ್ದುಲ್ ಲತೀಫ್ ಯಾನೆ ಲತೀಫ್ ತಲೆಮರೆಸಿಕೊಂಡಿದ್ದನು.

ಅಬ್ದುಲ್ ಲತೀಫ್ ಯಾನೆ ಲತೀಫ್ ವಿರುದ್ಧ ಕೇರಳ ರಾಜ್ಯದ ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಧಾನಿ ಜುವೆಲ್ಲರಿ ಶಾಪ್‌ನ ಸುಮಾರು 20 ಕೆ.ಜಿ.ಯಷ್ಟು ಬಂಗಾರವನ್ನು ಕಳ್ಳತನ ಮಾಡಿದ ಪ್ರಕರಣ ಮತ್ತು ಕೇರಳ ರಾಜ್ಯದ ಚಂದೇರ್ ಪೊಲೀಸ್ ಠಾಣಾ ವ್ಯಾಪ್ತಿಯ ಚೆರವತ್ತೂರು ವಿಜಯ ಬ್ಯಾಂಕ್‌ನ ಸುಮಾರು 15.80 ಕೆ.ಜಿ.ಯಷ್ಟು ಬಂಗಾರ ಮತ್ತು 2.5 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುತ್ತಾನೆ. 

ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article