ದಕ್ಷಿಣ ಕನ್ನಡ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ Sunday, August 17, 2025 ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಾಗೂ ನಾಳೆ ಮತ್ತು ನಾಡಿದ್ದು ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.