ಬಿಜೆಪಿ ದ.ಕ. ಜಿಲ್ಲಾ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
Friday, August 15, 2025
ಮಂಗಳೂರು: 79ನೇ ಸ್ವಾತಂತ್ರ್ಯೋತ್ಸವನ್ನು ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ನೆರವೇರಿಸಿದರು.
ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಸ್ವಾತಂತ್ರ ದಿನಾಚರಣೆ ಮಹತ್ವವನ್ನು ಹೇಳಿದರು.
ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಪೂಜಾ ಪೈ ಹಾಗೂ ಬಿಜೆಪಿಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.