ರಾಜ್ಯ ಬಿಜೆಪಿ ನಿಯೋಗ ಧರ್ಮಸ್ಥಳಕ್ಕೆ ಭೇಟಿ: ದೇವರ ದರ್ಶನ
Sunday, August 17, 2025
ಮಂಗಳೂರು: ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಹಿನ್ನೆಲೆ ಆ.17ರಂದು ಬೆಳಗ್ಗೆ ರಾಜ್ಯ ಬಿಜೆಪಿ ನಿಯೋಗ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ದೇವರ ದರ್ಶನ ಪಡೆದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರು, ಬಿಜೆಪಿಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.