
ಶಾಸಕ ಕಾಮತ್ ಉಪಸ್ಥಿತಿಯಲ್ಲಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆ
ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ಪಕ್ಷ ಸಂಘಟನಾತ್ಮಕ ನೆಲೆಯಲ್ಲಿ ಶಕ್ತಿಕೇಂದ್ರದ ಪ್ರಮುಖರಿಗೆ ಅತ್ಯಂತ ಹೆಚ್ಚಿನ ಜವಾಬ್ದಾರಿ ಇದೆ. ನಿಮ್ಮೆಲ್ಲರ ಸಾಮರ್ಥ್ಯ ಅರಿತೇ ಪಕ್ಷವು ಅಂತಹ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆ ಮಾಡಿದ್ದು, ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುವ ಸಂಕಲ್ಪ ನಿಮ್ಮದಾಗಲಿ. ಹಿರಿಯ ಕಾರ್ಯಕರ್ತರಿಂದ ಸಲಹೆಗಳನ್ನು ಪಡೆದುಕೊಂಡು, ಕಿರಿಯ ಕಾರ್ಯಕರ್ತರನ್ನು ಜೋಡಿಸಿಕೊಂಡು ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನಿಮ್ಮದು. ಮುಂಬರುವ ದಿನಗಳಲ್ಲಿ ಮಂಡಲ ಹಾಗೂ ಜಿಲ್ಲೆಯ ನೇತೃತ್ವದಲ್ಲಿ ಪಕ್ಷದ ಅನೇಕ ಚಟುವಟಿಕೆಗಳು ನಡೆಯಲಿದ್ದು, ಪ್ರತಿಯೊಂದು ಕಾರ್ಯಕ್ರಮದಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಜನ ವಿರೋಧಿ ನೀತಿಗಳು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಿಮ್ಮ ಸಹಕಾರ ಅತ್ಯಗತ್ಯವಾಗಿದ್ದು, ಮತ್ತೊಮ್ಮೆ ಎಲ್ಲರಿಗೂ ಶುಭವಾಗಲಿ, ಭಾರತೀಯ ಜನತಾ ಪಾರ್ಟಿ ಎಂಬ ಕುಟುಂಬದಲ್ಲಿ ಜೊತೆಯಾಗಿ ಸಾಗೋಣ ಎಂದು ಆಶಿಸುತ್ತೇನೆ ಎಂದು ತಿಳಿಸಿದರು.
ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಹಾಗೂ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.