ಕಾಲೇಜುಗಳಿಗೆ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವನ ಬಂಧನ

ಕಾಲೇಜುಗಳಿಗೆ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವನ ಬಂಧನ


ಮಂಗಳೂರು: ನಗರದಲ್ಲಿ ಕೆಲವು ಪ್ರತಿಷ್ಠಿತ ಕಾಲೇಜುಗಳಿಗೆಎ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧತ ವ್ಯಕ್ತಿಯನ್ನು ಕೇರಳದ ಏರ್ನಕುಲಂ ನಿವಾಸಿ ಮಹಮ್ಮದ್ ಹರ್ಷದ್ ಖಾನ್ (29) ಎಂದು ಗುರುತಿಸಲಾಗಿದೆ.

ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಎಂಡಿಎಂಎ ಹೈಡ್ರೋವಿಡ್ ಗಾಂಜಾ ಮತ್ತು ಎಮ್‌ಡಿಎಂಎ ಪಿಲ್ಸ್ ಅನ್ನು ಸರಬರಾಜು ಮಾಡುತ್ತಿದ್ದ ಓರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 53.29 ಗ್ರಾಂ. ಎಂಡಿಎಂಎ ಮತ್ತು 2.33 ಗ್ರಾಂ ಹೈಡ್ರೋವೀಡ್ ಗಾಂಜಾ ಮತ್ತು 0.45 ಗ್ರಾಂ MDMA PILLS ಅನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರಿಧಿಸಿಕೊಂಡು ಅದನ್ನು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ದೇರಳಕಟ್ಟೆಯ ಪರಿಸರದಲ್ಲಿ ನಿಂತುಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆ.29 ರಂದು ಮಾದಕ ವಸ್ತುವನ್ನು ಪತ್ತೆ ಹಚ್ಚಿ ಆತನಿಂದ 10,85,000 ರೂ. ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಹೈಡ್ರೋವಿಡ್ ಗಾಂಜಾ, MDMA PILLS ಮತ್ತು ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ಸಹಿತ ಒಟ್ಟು 11,05,500 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article