
ರಥಬೀದಿ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
Friday, August 29, 2025
ಮಂಗಳೂರು: ಇಲ್ಲಿಯ ರಥಬೀದಿಯ ಡಾ. ಪಿ. ದಯಾನಂದ ಪೈ.-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆ.29 ರಂದು ಮೇಜರ್ ಧ್ಯಾನ್ ಚಂದ್ ಜನ್ಮದಿನದ ಪ್ರಯುಕ್ತ ರಾಷ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಕೊಣಾಜೆಯ ದೈಹಿಕ ಶಿಕ್ಷಣ ನಿರ್ದೇಶಕಿ ಸೌಮ್ಯ ಟಿ.ಎನ್. ಅವರು ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಧ್ಯಾನ್ ಚಂದ್ ಅವರ ಜೀವನ, ಸಾಧನೆಗಳ ಬಗ್ಗೆ ಕುರಿತು ವಿಶ್ಲೇಷಣಾತ್ಮಕ ಉಪನ್ಯಾಸವನ್ನು ನೀಡಿದರು.
ಕಾಲೇಜಿನ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥರು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ದುಗ್ಗಪ್ಪ ಕಜೆಕಾರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕ್ರೀಡಾ ದಿನದ ಆಚರಣೆ ಮಹತ್ವವನ್ನು ತಿಳಿಸಿ, ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಹಸಂಚಾಲಕಿ ಡಾ. ಜ್ಯೋತಿಪ್ರಿಯಾ, ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಶುಭ ಕೆ.ಹೆಚ್., ಡಾ. ಅಪರ್ಣ ಆಳ್ವ ಎನ್. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅಕ್ಷತಾ ಪ್ರಾರ್ಥಿಸಿ, ಸೂರಜ್ ವ್ಯಕ್ತಿ ಪರಿಚಯ ನೀಡಿದರು. ಮನಿಷಾ ಸ್ವಾಗತಿಸಿ, ಲಿಖಿತಾ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ನಾಯಕಿ ಹೃನ್ಮ ವಂದಿಸಿದರು.