ಕೊಳೆರೋಗದಿಂದ ಅಡಿಕೆ ಬೆಳೆ ನಾಶ: ಪರಿಹಾರ ನೀಡುವಂತೆ ಮುಖ್ಯಮಂತ್ರಿಯವರಿಗೆ ಕ್ಯಾಂಪ್ಕೊ ಮನವಿ

ಕೊಳೆರೋಗದಿಂದ ಅಡಿಕೆ ಬೆಳೆ ನಾಶ: ಪರಿಹಾರ ನೀಡುವಂತೆ ಮುಖ್ಯಮಂತ್ರಿಯವರಿಗೆ ಕ್ಯಾಂಪ್ಕೊ ಮನವಿ

ಮಂಗಳೂರು: ನಿರಂತರ ಸುರಿಯುತ್ತಿರುವ ಮಳೆಯುಂದಾಗಿ ಮುಂಬರುವ ಅಡಿಕೆ ಬೆಳೆ ಭಾಗಶಃ ನಾಶವಾಗಿದ್ದು, ಇದೇ ರೀತಿ ಮಳೆ ಸುರಿದಲ್ಲಿ ಹೆಚ್ಚಿನ ಬೆಳೆ ನಾಶವಾಗಲಿದೆ. ಅಡಿಕೆ ಬೆಳೆ ನಾಶದ ಬಗ್ಗೆ ಸಮೀಕ್ಷೆ ನಡೆಸಿ, ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುವಂತೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಜಾಸ್ತಿ ಮುಂಗಾರು ಮಳೆ ಸುರಿಯುತ್ತಿದೆ. ಈಗಾಗಲೇ ಎರಡು ಬಾರಿ ಔಷಧಿ ಸಿಂಪಡಿಸಿದರೂ ಎಡೆಬಿಡದೇ ಸುರಿಯುತ್ತಿರುವ ಮಳೆಯ ಪರಿಣಾಮ ಕೊಳೆರೋಗದಿಂದ ಈಗಾಗಲೇ ಅರ್ಧ ಬೆಳೆ ನಾಶವಾಗಿ ಹೋಗಿದೆ. ಅಳಿದುಳಿದ ಬೆಳೆ ರಕ್ಷಣೆಗೆ ರೈತರು ಹೆಣಗಾಡುತ್ತಿದ್ದರೂ ಪರಿಣಾಮ ಶೂನ್ಯ. ಹತಾಶೆಯಿಂದ ರೈತರು ಪರಿಹಾರಕ್ಕಾಗಿ ಸರಕಾರದ ಕಡೆ ಆಶಾಭಾವನೆಯಿಂದ ನೋಡುತ್ತಿದ್ದಾರೆ.

ಮುಖ್ಯಮುಂತ್ರಿಯವರು ಬೆಳೆ ನಷ್ಟದ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಂದ ಸಮೀಕ್ಷೆ ನಡೆಸಬೇಕು. ಬೆಳೆ ನಾಶದಿಂದ ಉಂಟಾದ ಆರ್ಥಿಕ ನಷ್ಟಕ್ಕೆ ಪರಿಹಾರ ನೀಡುವಂತೆ ಕ್ಯಾಂಪ್ಕೊ ಅಧ್ಯಕ್ಷರು ಸಮಸ್ತ ಬೆಳೆಗಾರರ ಪರವಾಗಿ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article