‘ಲೋಕಾಯುಕ್ತ ಜನ ಸಂಪರ್ಕ ಸಭೆ’
Tuesday, August 19, 2025
ಮಂಗಳೂರು: ಆ.19 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಉಳ್ಳಾಲ ತಾಲೂಕಿನ ಉಳ್ಳಾಲ ನಗರ ಸಭೆ ಕಚೇರಿಯ ಸಭಾಂಗಣದಲ್ಲಿ ‘ಲೋಕಾಯುಕ್ತ ಜನ ಸಂಪರ್ಕ ಸಭೆ’ ನಡೆಯಿತು.
ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಮಾತನಾಡಿ, ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡುವಂತೆ ಸಾರ್ವಜನಿಕರಿಗೆ ತಿಳಿಸಿದ ಅವರು ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ 15 ದೂರುಗಳು ಸಾರ್ವಜನಿಕರಿಂದ ಸ್ವೀಕರಿಸಲಾಯಿತು.
ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್, ಪೊಲೀಸ್ ನಿರೀಕ್ಷಕರುಗಳಾದ ಭಾರತಿ ಜಿ., ಚಂದ್ರಶೇಖರ್ ಕೆ.ಎನ್. ಮತ್ತು ಸಿಬ್ಬಂದಿಯವರು ಹಾಗೂ ಉಳ್ಳಾಲ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.