ಚಿನ್ನದ ಸರ ಕಸಿದ ಆರೋಪಿ ಸೆರೆ

ಚಿನ್ನದ ಸರ ಕಸಿದ ಆರೋಪಿ ಸೆರೆ

ಮಂಗಳೂರು: ಉಪ್ಪಿನಂಗಡಿ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಚಿನ್ನದ ಸರ ಕಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿ ರೂ 5,05,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.

ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ, ಪಡುಬೆಟ್ಟು ಎಂಬಲ್ಲಿ ಜೂ.೪ ರಂದು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು, ಬೈಕಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಎಳೆದು ಬಲವಂತವಾಗಿ ಕಸಿದುಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಪ್ಪಿನಂಗಡಿ ಠಾಣಾ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಆರೋಪಿ ಸುಳ್ಯ, ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪುತ್ತೂರಿನ ನೆಕ್ಕಿಲಾಡಿ ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿತನಿಂದ ಅಂದಾಜು ರೂ 4,54,000ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿದಂತೆ, ಒಟ್ಟು 5,05,000 ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಬೈಕ್ ಗೆ ಸಂಬಂಧಿಸಿ ಮೈಸೂರು ನಗರದ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪತ್ತೆಕಾರ್ಯದಲ್ಲಿ, ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡರವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ರವರ ನೇತೃತ್ವದಲ್ಲಿ, ಉಪ್ಪಿನಂಗಡಿ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ತಂಡವು ಕಾರ್ಯಚರಣೆ ನಡೆಸಿರುತ್ತದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article