
ದ.ಕ. ಜಿಲ್ಲೆಯ ಕೆಲವು ತಾಲೂಕು ಹಾಗೂ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
Thursday, August 28, 2025
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು, ಪುತ್ತೂರು, ಮುಲ್ಕಿ, ಮೂಡುಬಿದಿರೆ, ಉಳ್ಳಾಲ ಹಾಗೂ ಬಂಟ್ವಾಳ ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಮತ್ತು ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.