ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ ೮ನೇ ಬಾರಿ ‘ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ’
ಸಂಘವು ಸಹಕಾರಿ ನೌಕರ ಸದಸ್ಯರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು, ಕಳೆದ 30 ವರ್ಷಗಳಿಂದ ತನ್ನ ಸದಸ್ಯರ ಆರ್ಥಿಕ ಬೇಡಿಕೆಯನ್ನು ಸತತವಾಗಿ ಪೂರೈಸಿ ಸದೃಢವಾಗಿ ಬೆಳೆದಿದೆ. ಸಂಘವು ಮಂಗಳೂರು ನಗರದ ಕೊಡಿಯಾಲ್‌ಬೈಲ್‌ನಲ್ಲಿ ಮೂರು ಅಂತಸ್ತಿನ ಸ್ವಂತ ಕಟ್ಟಡವನ್ನು ಹೊಂದಿದೆ. ಸಂಘವು ಸತತ ಲಾಭ ಗಳಿಕೆಯಲ್ಲಿದ್ದು, ಸಹಕಾರಿ ನೌಕರ ಸದಸ್ಯರ ಆರ್ಥಿಕ ಶಕ್ತಿ ಎನಿಸಿದೆ. ಸಂಘದ ಕಾರ್ಯ ಸಾಧನೆಯನ್ನು ಗುರುತಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ನೀಡುವ ಪ್ರತಿಷ್ಠಿತ ಸಾಧನಾ ಪ್ರಶಸ್ತಿಯು 2017-18, 2018-19, 2019-20, 2020-21, 2021-22, 2022-23, 2023-24ನೇ ಸಾಲಿನಲ್ಲಿ ಪ್ರಾಪ್ತಿಯಾಗಿತ್ತು. ಇದೀಗ ೨೦೨೪-೨೫ನೇ ಸಾಲಿನಲ್ಲೂ ಈ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಮುಡಿಗೇರಿಸಿಕೊಂಡಿದೆ.
ಶನಿವಾರ ನಡೆದ ಎಸ್‌ಸಿಡಿಸಿಸಿ ಬ್ಯಾಂಕಿನ 111ನೇ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘಕ್ಕೆ ನೀಡಿದ ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಟಿ.ಜಿ.ರಾಜರಾಮ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಎಸ್. ಬಿ. ಜಯರಾಮ ರೈ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಎಸ್.ಎನ್. ಮನ್ಮಥ, ಕುಶಾಲಪ್ಪ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಉಭಯ ಜಿಲ್ಲೆಗಳ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್. ಹಾಗೂ ಲಾವಣ್ಯ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಕಾರಿ ನೌಕರರ ಸಹಕಾರ ಸಂಘದ ಉಪಾಧ್ಯಕ್ಷ ರಾಘವ ಆರ್. ಉಚ್ಚಿಲ್, ನಿರ್ದೇಶಕರಾದ ಜಯಪ್ರಕಾಶ್ ರೈ, ಕಿರಣ್ ಕುಮಾರ್ ಶೆಟ್ಟಿ, ಪ್ರೇಮ್ ರಾಜ್ ಭಂಡಾರಿ ಉಪಸ್ಥಿತರಿದ್ದರು.