ತಲೆಮಾರಿಸಿಕೊಂಡಿದ್ದ ವ್ಯಕ್ತಿಯ ಬಂಧನ

ತಲೆಮಾರಿಸಿಕೊಂಡಿದ್ದ ವ್ಯಕ್ತಿಯ ಬಂಧನ


ಮಂಗಳೂರು: ಕಳೆದ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಜಾಮೀನು ಪಡೆದ ಬಳಿಕ ನ್ಯಾಯಾಲಯದ ಅದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಬಂಧಿತ ವ್ಯಕ್ತಿಯನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆಯ ನಿವಾಸಿ ಮಹಮ್ಮದ್ ಹನೀಫ್ (55) ಎಂದು ಗುರುತಿಸಲಾಗಿದೆ.

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 35/2001 ಕಲಂ: 379 ಜೊತೆಗೆ 34 ಭಾ.ದಂ.ಸಂ ನೇ ಪ್ರಕರಣದಲ್ಲಿ ಆರೋಪಿತನಾಗಿ 2018 ರಲ್ಲಿ ಜಾಮೀನು ಪಡೆದ ನಂತರ, ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.

ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 269 ಬಿ.ಎನ್ ಎಸ್.ರಂತೆ ಪ್ರಕರಣ ದಾಖಲು ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article