
ಚಂದ್ರಯಾನ ಕೊನೆಯಲ್ಲ ಇದು ಭಾರತದ ಸಾಧನೆಯ ಮೊದಲ ಹಂತ: ಡಾ. ಸಂಗೀತಲಕ್ಷ್ಮಿ ಎಮ್.ಜೆ.
ಅವರು ಆ.23 ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಸಾಯನ್ಸ್ ಮ್ಯೂಸಿಯಂ, ಸಂಸ್ಕೃತಿ ಸಚಿವಾಲಯ, ಭಾರತ ಸರ್ಕಾರ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯನ್ನು ಆಚರಿಸಲಾಯಿತು.
ಭಾರತದ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಮಹತ್ವದ ಸಾಧನೆಯನ್ನು ಸ್ಮರಿಸಲು ಬಾಹ್ಯಾಕಾಶ ದಿನವನ್ನುಆಚರಿಸುತ್ತಿದ್ದೇವೆ. ಗಗನಯಾನ, ಶುಕ್ರಯಾನ ಯೋಜನೆಗಳು ಭಾರತೀಯ ಬಾಹ್ಯಾಕಾಶ ಕೇಂದ್ರದ ಚಿಂತನೆಯಲ್ಲಿದೆ. ಮುಂದಿನ ದಿನಗಳಲ್ಲಿ ಮನುಷ್ಯ ಚಂದ್ರನಲ್ಲಿಗೆ ಹೋಗಿ ಉಳಿದುಕೊಳ್ಳುವ ಯೋಜನೆಗಳು ಸಹ ಪ್ರಗತಿಯಲ್ಲಿವೆ. ವಿದ್ಯಾರ್ಥಿಗಳು ಬಾಹ್ಯಾಕಾಶ ಕುರಿತು ಹೆಚ್ಚು ಹೆಚ್ಚು ಅಧ್ಯಯನ ಮಾಡಲು ವಿಫುಲವಾದ ಅವಕಾಶಗಳಿವೆ ಎಂದರು.
ಉದ್ಘಾಟನಾ ಕಾರ್ಯಕ್ರಮದ ನಂತರ ಕೇಂದ್ರದ ವೈಜ್ಞಾನಿಕಾಧಿಕಾರಿ ವಿಘ್ನೇಶ್ ಭಟ್ ಗ್ರಹಗಳು, ಉಪಗ್ರಹಗಳ ಗುಣಲಕ್ಷಣಗಳು, ಧೂಮಕೇತುಗಳು ಮತ್ತು ಇತರ ಆಕಾಶಕಾಯಗಳ ಬಗ್ಗೆ ತಾರಾಲಯದಲ್ಲಿ ವಿವರಣೆ ನೀಡಿದರು.
ನಂತರ ವಿದ್ಯಾರ್ಥಿಗಳಿಗೆ ಲಿಖಿತ ರಸಪ್ರಶ್ನೆಯನ್ನು ಹಮ್ಮಿಕೊಳ್ಳಲಾಯಿತು. ಜೊತೆಗೆ ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಬಗ್ಗೆ ಚಿತ್ರಕಲೆ, ಪವರ್ಪಾಯಿಂಟ್ ರಚಿಸಿ ಪ್ರಸ್ತುತ ಪಡೆಸುವ ಸ್ಪರ್ಧೆಗಳನ್ನು ಸಹ ಆಯೋಜನೆ ಮಾಡಲಾಗಿತ್ತು. ಭಾಗವಹಿಸಿದವರಿಗೆ ಖಗೋಳಶಾಸ್ತ್ರ ಮತ್ತು ಬಾಹ್ಯಾಕಾಶ ಸಂಬಂಧಿ ಪೋಸ್ಟರ್ ವಸ್ತು ಪ್ರದರ್ಶನವನ್ನು ಏರ್ಪಡಿಲಾಗಿತ್ತು.
ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ, ಕೇಂದ್ರದ ಪ್ರಭಾರ ನಿರ್ದೇಶಕ ಡಾ. ಅಶೋಕ್ ಕೆ.ಆರ್ ಭಾಗವಹಿಸಿ ಮಾತನಾಡುತ್ತಾ ಇಂತಹ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಈ ದಿನದ ಮಹತ್ವ ಮತ್ತು ಉದ್ದೇಶಗಳನ್ನು ಅರಿತುಕೊಂಡು, ಕೇಂದ್ರದಲ್ಲಿ ಹಲವಾರು ವಿಜ್ಞಾನ ಸಂಬಂಧಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಇದರ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳಬೇಕೆಂದರು.
ಕೊನೆಯಲ್ಲಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿಜ್ಞಾನ ಕೇಂದ್ರದ ಕ್ಯುರೇಟರ್ ಜಗನ್ನಾಥ್ ಸ್ವಾಗತಿಸಿ, ಶೈಕ್ಷಣಿಕ ಸಹಾಯಕಿ ರಶ್ಮಿ ಕಾರ್ಯಕ್ರಮ ನಿರೂಪಿಸಿದರು. ಇನ್ನೋವೇಶನ್ ಹಬ್ನ ಮೆಂಟರ್ ಸಹಾನ ವಂದಿಸಿದರು.