ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ಕರೀಷ್ಮಾ
Saturday, August 30, 2025
ಮಂಗಳೂರು: ಇಂಟಕ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ನ್ಯಾಯವಾದಿ ಕರೀಷ್ಮಾ ಎಸ್. ಅವರು ಆಯ್ಕೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ. ಎಜೆ ಅಕ್ರಂ ಪಾಶಾ ಹಾಗೂ ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಅಧ್ಯಕ್ಷ ಟಿ.ವೈ ಕುಮಾರ್ ಅವರ ಆದೇಶದ ಮೇರೆಗೆ ಈ ಆಯ್ಕೆ ನಡೆದಿದ್ದು ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ (ಐ.ಎನ್.ಟಿ.ಯು.ಸಿ) ಕಾಂಗ್ರೆಸ್ ವಿಭಾಗದ ಮಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಕರಿಷ್ಮಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.