ಬಲ್ಮಠ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ
Saturday, August 2, 2025
ಮಂಗಳೂರು: ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ಬಲ್ಮಠ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2025-26ನೇ ಸಾಲಿನ ಚಟುವಟಿಕೆಗಳ ಉದ್ಘಾಟನೆಯನ್ನು ಬಲ್ಮಠದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಸುಮನಾ ಬಿ. ಅವರು ನರವೇರಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಹಾಗೂ ಜೀವನ ಕೌಶಲ್ಯಗಳನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪ್ರಮುಖ ಪಾತ್ರ ವಹಿಸುತ್ತದೆ. ಇಲ್ಲಿ ತಮ್ಮನ್ನು ಸರಿಯಾಗಿ ತೊಡಗಿಸಿಕೊಂಡಾಗ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲೆ ವನಿತ ದೇವಾಡಿಗ ಅವರು ಪ್ರಮಾಣ ವಚನ ಬೋಧಿಸಿ ಎನ್‌ಎಸ್‌ಎಸ್‌ನ ಚಟುವಟಿಕೆಗಳನ್ನು ಹಮ್ಮಿಕೊಂಡಾಗ ವಿದ್ಯಾರ್ಥಿಗಳು ತಪ್ಪದೇ ಭಾಗವಹಿಸಬೇಕು ಎಂದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಪ್ರವೀಣ ಕಾರ್ಡೋಜ ಇವರು ಎನ್‌ಎಸ್‌ಎಸ್‌ನ ಧ್ಯೇಯ ಮತ್ತು ಉದ್ದೇಶದ ಬಗ್ಗೆ ಪ್ರಸ್ತಾಪಿಸಿದರು.
ವೇದಿಕೆಯಲ್ಲಿ ಎನ್‌ಎಸ್‌ಎಸ್ ಘಟಕದ ನಿಕಟಪೂರ್ವ ಕಾರ್ಯಕ್ರಮಾಧಿಕಾರಿ ಚೇತನ, ಹಿರಿಯ ಉಪನ್ಯಾಸಕಿ ಯಶೋಧ ಕೆ. ಹಾಗೂ ನಾಯಕಿಯರಾದ ಅನ್ನ ಮರಿಯಾ ಮತ್ತು ಸವಿತಾ ಉಪಸ್ಥಿತರಿದ್ದರು. ಸಹ ಕಾರ್ಯಕ್ರಮಾಧಿಕಾರಿ ಸಂತೋಷ ಸಿ. ಸ್ವಾಗತಿಸಿ, ಸ್ವಯಂ ಸೇವಕಿಯರಾದ ಲೋಕೇಶ್ವರಿ ಕಾರ್ಯಕ್ರಮ ನಿರೂಪಿಸಿದರು. ಸಂಗಮ್ಮ ವಂದಿಸಿದರು.