ಸಮಾಜದ ಎಲ್ಲರೂ ಒಂದಾಗಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕು: ಡಾ.ಎಂ.ಎನ್.ಆರ್
Sunday, August 24, 2025
ಮಂಗಳೂರು: ಸಮಾಜದ ಎಲ್ಲರೂ ಒಂದಾಗಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕು ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಎಲ್ಲ ಧಾರ್ಮಿಕ ಕ್ಷೇತ್ರಗಳನ್ನು ಸಂರಕ್ಷಿಸುವ ಕೆಲಸ ಆಗಬೇಕು. ಇದೇ ರೀತಿ ಮುಂದುವರಿಯಲು ಬಿಟ್ಟರೆ ಎಲ್ಲ ಕಡೆ ಧಾರ್ಮಿಕ ಕ್ಷೇತ್ರಗಳ ಹೆಸರು ಹಾಳು ಮಾಡುವ ಕೆಲಸ ನಡೆಯಬಹುದು. ಇದಕ್ಕೆ ಅವಕಾಶ ನೀಡಬಾರದು ಎಂದರು.
ಅನಾಮಿಕ ದೂರುದಾರ ಚಿನ್ನಯ್ಯನ ಬಂಧನ ಮಾಡಿರುವುದು ಉತ್ತಮ ಕೆಲಸ. ಈ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಬೇಕು. ದೇಶದ ಎಲ್ಲ ಹಿಂದೂಗಳ ಆರಾಧ್ಯ ಕ್ಷೇತ್ರವಾಗಿರುವ ಧರ್ಮಸ್ಥಳದ ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಆಗಬಾರದು ಎಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.