ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಸರು ಕುಡಿಕೆ ಉತ್ಸವ ಸಂಭ್ರಮ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಸರು ಕುಡಿಕೆ ಉತ್ಸವ ಸಂಭ್ರಮ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಮೊಸರು ಕುಡಿಕೆ ಉತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮಂಗಳೂರು ನಗರದ ಉರ್ವ, ಕೊಟ್ಟಾರ, ಕಾವೂರು, ತೊಕ್ಕೊಟ್ಟು ಮುಂತಾದೆಡೆ ವಿಜೃಂಭಣೆಯಿಂದ ಮೊಸರು ಕುಡಿಕೆ ಉತ್ಸವ ನಡೆಯಿತು.


ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ಆಚರಣೆಗೊಂಡ ಮೊಸರುಕುಡಿಕೆ ಉತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನತೆ ಭಾಗವಹಿಸಿದ್ದರು. ಅಲ್ಲಲ್ಲಿ ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ಸ್ಪರ್ಧೆಗಳನ್ನೂ ಆಯೋಜಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಶನಿವಾರ ನಗರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಆಚರಿಸಲಾಯಿತು. ಕುಳಾಯಿ ಇಸ್ಕಾನ್ ಶ್ರೀ ರಾಧಾ ಗೋವಿಂದ ಮಂದಿರದಲ್ಲಿಯೂ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ನಡೆಯಿತು.

ಡಿಜೆ ಬಳಸಿದ್ದಕ್ಕೆ ಕಾವೂರಿನಲ್ಲಿ ಕೇಸ್:

ನಗರದ ಹೊರವಲಯದ ಕಾವೂರು ಬಳಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರುಕುಡಿಕೆ ಉತ್ಸವದಲ್ಲಿ ಡಿ.ಜೆ. ಬಳಕೆ ಮಾಡಿದವರು ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಉತ್ಸವದ ಹಿನ್ನಲೆಯಲ್ಲಿ ಉತ್ಸವ ಹಾಗೂ ಮೆರವಣಿಗೆ ಹಿನ್ನಲೆಯಲ್ಲಿ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಮಾರ್ಗಸೂಚಿ ಬಿಡುಗಡೆ ಮಾಡಿದ್ದರು. ಇದರಲ್ಲಿ ಮೆರವಣಿಗೆಗೆ ಡಿ.ಜೆ. ಬಳಕೆ ಮಾಡುವಂತಿಲ್ಲ ಎಂದು ನಿರ್ದೇಶನ ನೀಡಿದ್ದರು. ಆದರೆ ಉರುಂದಾಡಿಗುಡ್ಡೆಯ ಮೆರವಣಿಗೆಯಲ್ಲಿ ಡಿ.ಜೆ.ಬಳಕೆ ಮಾಡಿದ್ದಕ್ಕೆ ಕೆಲವು ಆರೋಪ ಮಾಡಿದ ಹಿನ್ನೆಲೆಯಲ್ಲಿ ಆಯೋಜಕರ ವಿರುದ್ಧ ಕೇಸು ದಾಖಲಾಗಿದೆ. ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿ ಅದಕ್ಕೆ ಬಳಸಿದ ಉಪಕರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಇದು ಮಾತ್ರವಲ್ಲದೆ ಜನ್ಮಾಷ್ಟಮಿ ಕಾರ್ಯಕ್ರಮದ ಆಯೋಜಕರು ಹಾಗೂ ಡಿ.ಜೆ. ಸಂಗೀತ ಟ್ಯಾಬ್ಲೋ ವ್ಯವಸ್ಥೆ ಮಾಡಿದ ಸಂಘಟಕರ ಮೇಲೂ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article