
ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ಉಜಿರೆ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ಎರಡನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ಅವರು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 15,000 ರೂ ದಂಡ ಹಾಗೂ 2 ವರ್ಷ ಸರಳ ಜೈಲು ಹಾಆಗೂ 5,000 ರೂ. ವಿಧಿಸಿ ಆದೇಶಿಸಿದ್ದಾರೆ.
ಘಟನೆಯ ವಿವರ:
1-03-2014 ರಂದು ಬೆಳ್ತಂಗಡಿ ಉಜಿರೆಯಲ್ಲಿರುವ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ ಕ್ರ: 126/2014, ಕಲಂ:302.201 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಪ್ರಕರಣದ ಆರೋಪಿಯಾದ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತನನ್ನು ಬಂಧಿಸಿ, ವಿಚಾರಣೆ ನಡೆಸಿ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಲಿಂಗಪ್ಪ ಪೂಜಾರಿ ಅವರು ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ದೋಷರೊಪಾಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.
ಈ ಪ್ರಕರಣದಲ್ಲಿ ಹೆಚ್ಚುವರಿಯಾಗಿ ಅಳವಡಿಸಲಾದ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ, ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅದೀಕ್ಷಕ ರಾಹುಲ್ ಕುಮಾರ್ ಶಹಪುರ್ ಅವರು ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತು ಸತ್ರ ನ್ಯಾಯಾಲಯ ಮಂಗಳೂರಿಗೆ ಸಲ್ಲಿಸಿರುವುದಾಗಿದೆ.
ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರಾಗಿ ಜ್ಯೋತಿ ಪಿ. ನಾಯಕ್ ಅವರು ವಾದ ಮಂಡಿಸಿರುತಾರೆ. ಪ್ರಕರಣದ ತನಿಖೆಯಲ್ಲಿ ತನಿಖಾ ಸಹಾಯಕರಾಗಿ ಎಎಸ್‌ಐ ಕಲೈಮಾರ್ ಅವರು ಹಾಗೂ ನ್ಯಾಯಾಲಯ ಸಿಬ್ಬಂದಿಯಾಗಿ ಮಲ್ಲಿಕಾರ್ಜುನ್ ಅವರು ಕರ್ತವ್ಯ ನಿರ್ವಹಿಸಿದ್ದಾರೆ.